ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಪೊಲೀಸರು ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಹಲವರು ಟ್ವಿಟರ್‌ನಲ್ಲಿ ಚರ್ಚಿಸುತ್ತಿದ್ದಾರೆ. ವ್ಯಕ್ತಿಯೊಬ್ಬರನ್ನು ಎಳೆದಾಡುತ್ತಿರುವ ಚಿತ್ರವನ್ನು ಶೇರ್ ಮಾಡಿದ್ದಾರೆ. ಇದು ಮಹಾರಾಷ್ಟ್ರ ಪೊಲೀಸರ ಉದ್ಧಟತನ ಎಂದು ಬಿಜೆಪಿ ವಕ್ತಾರ ಗೌರವ್ ಗೋಯಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಚಿತ್ರದಲ್ಲಿರವ ವ್ಯಕ್ತಿ ಅರ್ನಬ್ ಅಲ್ಲ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ಘಟಕ ಸ್ಪಷ್ಟಪಡಿಸಿದೆ. ಇದೇ ಜನವರಿಯಲ್ಲಿ ಉತ್ತರ ಪ್ರದೇಶದಲ್ಲಿ ತೆಗೆದ ಚಿತ್ರ ಇದು ಎಂದು ಅಭಿಜಿತ್ ದೀಪ್ಕೆ ಎಂಬುವರು ಟ್ವೀಟ್ ಮಾಡಿದ್ದಾರೆ. ಈ ಚಿತ್ರಗಳನ್ನು ಇಟ್ಟುಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಅಪಮಾನ ಮಾಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.