ADVERTISEMENT

ಫ್ಯಾಕ್ಟ್‌ ಚೆಕ್‌ | ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೊರೊನಾ ಸೋಂಕಿತರೇ?

​ಪ್ರಜಾವಾಣಿ ವಾರ್ತೆ
Published 22 ಮೇ 2020, 6:34 IST
Last Updated 22 ಮೇ 2020, 6:34 IST
   

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೋವಿಡ್‌–19 ಕಾಯಿಲೆ ಇರುವುದು ದೃಢಪಟ್ಟಿದೆ ಎಂಬ ಮಾಹಿತಿ ವಾಟ್ಸ್‌ ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಅದಕ್ಕೆ ಪೂರಕವಾಗಿ ಟಿವಿ ವರದಿಯೊಂದರ ವಿಡಿಯೊ ತುಣುಕನ್ನು ಹಂಚಿಕೊಳ್ಳಲಾಗಿದೆ.

ಟ್ರಂಪ್‌ ಅವರು ಆರೋಗ್ಯದಿಂದ ಇದ್ದು, ವಾಟ್ಸ್‌ ಆ್ಯಪ್‌ನಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳಿನಿಂದ ಕೂಡಿದೆ. ಅವರು ಪ್ರತಿದಿನ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗುತ್ತಿದ್ದು, ಇದುವರೆಗೆ ಅವರಲ್ಲಿ ಸೋಂಕು ತಗುಲಿರುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ವೈಟ್‌ಹೌಸ್‌ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ‘ಮುನ್ನೆಚ್ಚರಿಕೆ ಕ್ರಮವಾಗಿ ನಾನು ನಿತ್ಯ ಹೈಡ್ರಾಕ್ಸಿಕ್ಲೊರೊಕ್ವಿನ್‌ ಮಾತ್ರೆಯನ್ನು ತೆಗೆದುಕೊಳ್ಳುತ್ತಿರುವೆ’ ಎಂದು ಸ್ವತಃ ಟ್ರಂಪ್‌ ಮಾಹಿತಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT