ADVERTISEMENT

ಫ್ಯಾಕ್ಟ್‌ ಚೆಕ್‌ | ವಲಸೆ ಕಾರ್ಮಿಕರು ಉತ್ತರ ಪ್ರದೇಶ ಗಡಿಯಲ್ಲಿ ಸೇರಿದ್ದು ನಿಜವೇ?

​ಪ್ರಜಾವಾಣಿ ವಾರ್ತೆ
Published 23 ಮೇ 2020, 1:09 IST
Last Updated 23 ಮೇ 2020, 1:09 IST
   

ಲಾಕ್‌ಡೌನ್ ಕಾರಣವಾಗಿ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿದ್ದ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ರಾಜ್ಯದ ಗಡಿಯಲ್ಲಿ ಜಮಾವಣೆಗೊಂಡಿದ್ದಾರೆ. ಆದರೆ ಗಡಿ ಪ್ರವೇಶಿಸಲು ಸರ್ಕಾರ ಅವಕಾಶ ನೀಡಿಲ್ಲ. ಯಾರೂ ಅಂತರ ಕಾಯ್ದುಕೊಂಡಿರಲಿಲ್ಲ ಎಂಬ ದೃಶ್ಯ ಇರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದು ಹಳೆಯ ವಿಡಿಯೊ ಎಂಬ ಅಂಶವನ್ನು ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ಪತ್ತೆಹಚ್ಚಿದೆ. ಗಾಜಿಯಾಬಾದ್‌ನಲ್ಲಿ 2019ರಲ್ಲಿ ನಡೆದ ಸೇನಾ‌ ನೇಮಕಾತಿಯ ವಿಡಿಯೊ ಇದು ಎಂದು ಸ್ಪಷ್ಟಪಡಿಸಲಾಗಿದೆ. ಉದ್ಯೋಗಾಕಾಂಕ್ಷಿಗಳುಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT