ನವದೆಹಲಿ: ‘ದೇಶದಲ್ಲಿ ಕೋವಿಡ್ ಪ್ರಕರಣಗಳು ಶೀಘ್ರಗತಿಯಲ್ಲಿ ಏರಿಕೆಯಾಗುತ್ತಿವೆ. ಮರಣ ಪ್ರಮಾಣವೂ ಹೆಚ್ಚಳವಾಗಿದೆ. ಸೋಂಕು ಹರಡುವುದನ್ನು ತಡೆಯಲು ಎಲ್ಲ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.
ಸೋಂಕು ಇನ್ನಷ್ಟು ಪಸರಿಸುವುದನ್ನು ತಡೆಯಲು ಸೆಪ್ಟೆಂಬರ್ 25ರಿಂದ 46 ದಿನಗಳ ಕಾಲ ದೇಶದಾದ್ಯಂತ ಲಾಕ್‌ಡೌನ್ ಮತ್ತೆ ಜಾರಿಗೊಳಿಸಬೇಕು ಎಂದು ಪ್ರಧಾನಿ ಕಚೇರಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ’ –ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎನ್‌ಡಿಆರ್‌ಎಫ್) ಹೆಸರಿನಲ್ಲಿ ಹೊರಡಿಸಲಾಗಿರುವ ಪತ್ರದಲ್ಲಿ ಈ ರೀತಿಯ ಉಲ್ಲೇಖ ಕಂಡುಬಂದಿದೆ. ಮತ್ತೆ ಲಾಕ್‌ಡೌನ್ ಎಂಬುದು ದೇಶದ ಜನರಲ್ಲಿ ಆತಂಕ ಮೂಡಿಸಿದೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುವ ಎನ್‌ಡಿಆರ್‌ಎಫ್ ಇಂತಹ ಯಾವುದೇ ಶಿಫಾರಸು ನೀಡಿಲ್ಲ. ಮತ್ತೆ ಲಾಕ್‌ಡೌನ್ ಎಂಬುದು ಸುಳ್ಳು. ಪತ್ರ ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.