ADVERTISEMENT

ಚೀನಾ ಸೈನಿಕರ ಹತ್ಯೆಯನ್ನು ಖಂಡಿಸಿ ಸಿಪಿಎಂ ನಾಯಕರು ಪ್ರತಿಭಟನೆ ನಡೆಸಿದ್ದರೇ?

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 19:30 IST
Last Updated 21 ಜೂನ್ 2020, 19:30 IST
ಪ್ರಜಾವಾಣಿ ಫ್ಯಾಕ್ಟ್‌ ಚೆಕ್
ಪ್ರಜಾವಾಣಿ ಫ್ಯಾಕ್ಟ್‌ ಚೆಕ್   
""

‘ಭಾರತೀಯ ಸೈನಿಕರು ಚೀನಾದ ಸೈನಿಕರ ಹತ್ಯೆ ಮಾಡಿರುವುದನ್ನು ಖಂಡಿಸಿ ಸಿಪಿಎಂ ನಾಯಕರು ಪ್ರತಿಭಟನೆ ನಡೆಸಿದ್ದರು. ಸೀತಾರಾಂ ಯೆಚೂರಿ, ವೃಂದಾ ಕಾರಟ್‌, ಪ್ರಕಾಶ್‌ ಕಾರಟ್‌ ಮುಂತಾದವರು ಪಾಲ್ಗೊಂಡಿದ್ದರು’ ಎಂದು ಚಿತ್ರಸಹಿತವಾದ ಸಂದೇಶ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದು ತಪ್ಪು ಮಾಹಿತಿ ನೀಡುವಂಥ ಸಂದೇಶವಾಗಿದೆ. ಕೋವಿಡ್‌ ಹಾಗೂ ದೇಶದ ಅರ್ಥವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸರರ್ಕಾರದ ವೈಫಲ್ಯವನ್ನು ಖಂಡಿಸಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರು ಜೂನ್‌ 16ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದ ಚಿತ್ರಗಳನ್ನು ಬಳಸಿ ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT