ಅಸ್ಸಾಂನಲ್ಲಿ ಕಠಿಣ ಲಾಕ್‌ಡೌನ್ ಹೇರುವ ಭರದಲ್ಲಿ ಪೊಲೀಸರು ತರಕಾರಿ ವ್ಯಾಪಾರಿಗಳ ಮೇಲೆ ಹಿಂಸೆ ಎಸಗಿದ್ದಾರೆ ಎಂಬುದನ್ನು ಬಿಂಬಿಸುವ ಚಿತ್ರ ವೈರಲ್ ಆಗಿದೆ. ಪೊಲೀಸರ ಈ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಖಂಡನೆ ವ್ಯಕ್ತವಾಗಿದೆ. ‘ಪೊಲೀಸರಿಗೆ ರೈತರು ಬೆಳೆದ ಬೆಳೆಗಳ ಬೆಲೆ ತಿಳಿದಿಲ್ಲ. ಅವರು ಖಾಕಿ ಕಳಚಿಟ್ಟು ರೈತರ ರೀತಿ ಹೊಲಕ್ಕೆ ಇಳಿದು ದುಡಿದರೆ ಗೊತ್ತಾಗುತ್ತದೆ’ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದಾರೆ.
ವೈರಲ್ ಆಗಿರುವ ಚಿತ್ರವನ್ನು ರಿವರ್ಸ್ ಇಮೇಜ್ ತಂತ್ರದ ಮೂಲಕ ಪರಿಶೀಲಿಸಿದಾಗ, ಅದು 2020ನೇ ಇಸ್ವಿಯಲ್ಲಿ ಸೆರೆಹಿಡಿದ ಚಿತ್ರ ಎಂಬುದು ಕಂಡುಬಂದಿದೆ. ಈ ಚಿತ್ರವು ಅಸ್ಸಾಂಗೆ ಸಂಬಂಧಿಸಿಲ್ಲ. ಇದು ಪಶ್ಚಿಮ ಬಂಗಾಳದ ಚಿತ್ರ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆ ಖಚಿತಪಡಿಸಿದೆ. ಕೃಷಿ ಕಾಯ್ದೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಹಾಗೂ ರೈತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದಾಗ ಈ ಚಿತ್ರ ತೆಗೆಯಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.