ADVERTISEMENT

ಫ್ಯಾಕ್ಟ್‌ಚೆಕ್ | ಇಂಥ ಯೋಜನೆ ಪ್ರಕಟಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 20:26 IST
Last Updated 1 ಸೆಪ್ಟೆಂಬರ್ 2020, 20:26 IST
   

‘ಕೊರೊನಾ ವೈರಸ್ ಸೋಂಕಿನ ತೀವ್ರತೆ ಹೆಚ್ಚಾಗಿರುವ ಕಾರಣ ದೇಶದಾದ್ಯಂತ ಜನರು ಸಂಕಷ್ಟದಲ್ಲಿದ್ದಾರೆ. ಅವರ ಕಷ್ಟಕ್ಕೆ ಕೊಂಚ ಮಟ್ಟಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹೊಸ ಯೋಜನೆಯೊಂದನ್ನು ಪ್ರಕಟಿಸಿದೆ. ಅದುವೇ ವಿದ್ಯುತ್ ಶುಲ್ಕ ವಿನಾಯಿತಿ ಯೋಜನೆ. ಯೋಜನೆಯ ಪ್ರಕಾರ, ಸೆಪ್ಟೆಂಬರ್ 1ರಿಂದ ಜನರು ತಾವು ಬಳಸುವ ವಿದ್ಯುತ್ ಶುಲ್ಕವನ್ನು ಪಾವತಿಸುವ ಅವತ್ಯವಿಲ್ಲ. ಶುಲ್ಕವನ್ನು ಸರ್ಕಾರವೇ ಭರಿಸಲಿದೆ’ ಎಂಬುದಾಗಿ ಸುದ್ದಿ ವಾಹಿನಿಯೊಂದು ಇತ್ತೀಚೆಗೆ ವರದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಂಬಿಸುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ವಿದ್ಯುತ್ ಬಿಲ್ ಮನ್ನಾ ಕುರಿತ ಸುದ್ದಿ ಜನರಲ್ಲಿ ಸಾಕಷ್ಟು ಗೊಂದಲವನ್ನು ಉಂಟು ಮಾಡಿದೆ. ಇದಕ್ಕೆ ಸ್ಪಷ್ಟನೆ ನೀಡುವ ಯತ್ನವನ್ನು ಸರ್ಕಾರದ ಪಿಐಬಿ ಫ್ಯಾಕ್ಟ್‌ಚೆಕ್ ವೇದಿಕೆ ಮಾಡಿದೆ. ಕೇಂದ್ರ ಸರ್ಕಾರವು ಇಂತಹ ಯಾವುದೇ ಯೋಜನೆಯನ್ನು ಪ್ರಕಟಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT