ADVERTISEMENT

ಫ್ಯಾಕ್ಟ್‌ಚೆಕ್: ದೆಹಲಿ ಸರ್ಕಾರದಿಂದ ಮುಸ್ಲಿಂ ವಿದ್ಯಾರ್ಥಿಗಳ ಶುಲ್ಕ ಪಾವತಿ?

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 20:51 IST
Last Updated 2 ಜೂನ್ 2022, 20:51 IST
   

ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಸರ್ಕಾರವು ಮುಸ್ಲಿಂ ಓಲೈಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ. 1ರಿಂದ 10ನೇ ತರಗತಿಯ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ತುಂಬಿಕೊಡಲುಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಹೇಳಿದೆ. ಶಿಕ್ಷಣ ಇಲಾಖೆ ಹೊರಡಿಸಿದ್ದು ಎನ್ನಲಾದ ಸುತ್ತೋಲೆಯ ಪ್ರತಿಯನ್ನು ಹಲವು ಬಿಜೆಪಿ ಮುಖಂಡರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಮುಸ್ಲಿಂ ವಿದ್ಯಾರ್ಥಿಗಳ ಶುಲ್ಕವನ್ನು ಮಾತ್ರ ಸರ್ಕಾರ ತುಂಬಿಕೊಡಲು ಮುಂದಾಗಿದೆ. ಹಿಂದೂ ಆಗಿ ಇರುವುದು ಅಪರಾಧವೇ’ ಎಂದು ಬಿಜೆಪಿ ಮುಖಂಡ ವಿಕ್ರಂ ಬಿಧೂರಿ ಎಂಬುವರು ಪ್ರಶ್ನಿಸಿದ್ದಾರೆ.

ಸರ್ಕಾರ ಹೊಡಿಸಿದ್ದ ಸುತ್ತೋಲೆಯ ಎಲ್ಲಿಯೂ, ಕೇವಲ ಮುಸ್ಲಿಂ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ತುಂಬಿಕೊಡಲಿದೆ ಎಂಬ ಉಲ್ಲೇಖವಿಲ್ಲ. ಶಾಲೆಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲ ವಿದ್ಯಾರ್ಥಿಗಳ ಶುಲ್ಕವನ್ನು ಭರಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT