ಸಾಂದರ್ಭಿಕ ಚಿತ್ರ
ಹಲವರು ಪೊಲೀಸ್ ಠಾಣೆಯ ಸೆಲ್‌ನಲ್ಲಿ ಇರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪೊಲೀಸ್ ಅಧಿಕಾರಿಗಳು, ಸೆಲ್‌ನಲ್ಲಿ ಇರುವ ವ್ಯಕ್ತಿಗಳಿಗೆ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯಗಳೂ ಆ ವಿಡಿಯೊದಲ್ಲಿ ಇವೆ. ಈ ವಿಡಿಯೊ ಜತೆಗೆ, ‘ನೋಡಿ, ಮೀರಾ ರೋಡ್‌ನಲ್ಲಿ ದಾಂದಲೆ ನಡೆಸಿದವರನ್ನು ಪೊಲೀಸರು ಕಂಬಿಗಳ ಹಿಂದೆ ತಳ್ಳಿದ್ದಾರೆ. ಅವರಿಗೆ ಸರಿಯಾಗಿ ಕಜ್ಜಾಯವನ್ನೂ ಕೊಡುತ್ತಿದ್ದಾರೆ’ ಎಂಬ ಸಂದೇಶವನ್ನೂ ಹಂಚಿಕೊಳ್ಳಲಾಗುತ್ತಿದೆ. ಇನ್ನೂ ಕೆಲವರು, ರಾಮ ಮಂದಿರ ಲೋಕಾರ್ಪಣೆಯ ದಿನ ಗಲಭೆ ನಡೆಸಿದ, ಪ್ರತಿಭಟಿಸಿದ ‘ಅವರಿಗೆ’ ತಕ್ಕ ಶಾಸ್ತಿಯಾಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಇದು ತಿರುಚಲಾದ ಮಾಹಿತಿ.
ಸಾಮಾಜಿಕ ಜಾಲತಾಣಗಳಲ್ಲಿ ಹೇಳುತ್ತಿರುವಂತೆ, ಇದು ಇದೇ ಜನವರಿ 22ರಂದು ನಡೆದಿದ್ದ ಸಂಘರ್ಷದ ಆರೋಪಿಗಳಿಗೆ ಸಂಬಂಧಿಸಿದ ವಿಡಿಯೊ ಅಲ್ಲ. ಇದು, ಬಿಜೆಪಿ ನಾಯಕಿಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದರ ಬಗ್ಗೆ ನೀಡಿದ್ದ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದವರಿಗೆ ಸಂಬಂಧಿಸಿದ ವಿಡಿಯೊ. ನೂಪರ್ ಶರ್ಮಾ ಅವರ ಹೇಳಿಕೆಯನ್ನು ಖಂಡಿಸಿ 2022ರ ಜೂನ್‌ನಲ್ಲಿ ಉತ್ತರ ಪ್ರದೇಶದ ಹಲವೆಡೆ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಶಹರಾನ್‌ಪುರದಲ್ಲಿ ಹೀಗೆ ಪ್ರತಿಭಟನೆ ನಡೆಸಿದ್ದವರನ್ನು ವಶಕ್ಕೆ ಪಡೆದು ಪೊಲೀಸರು ಹಲ್ಲೆ ನಡೆಸಿದ್ದರು. ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದಕ್ಕೆ ಆಕ್ಷೇಪಗಳೂ ವ್ಯಕ್ತವಾಗಿದ್ದವು. ಆದರೆ ಈಗ ಆ ಹಳೆಯ ವಿಡಿಯೊವನ್ನು ಬಳಸಿಕೊಂಡು ಸುಳ್ಳು ಸುದ್ದಿ ಸೃಷ್ಟಿಸಲಾಗಿದೆ ಎಂದು ಪಿಟಿಐ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.