ADVERTISEMENT

ಫ್ಯಾಕ್ಟ್ ಚೆಕ್: ಪ್ರಿಯಾಂಕಾ ಸಂತ್ರಸ್ತೆಯ ಮಾತು ಆಲಿಸಲಿಲ್ಲವೇ?

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 18:38 IST
Last Updated 25 ಫೆಬ್ರುವರಿ 2021, 18:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

‘ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಮಥುರಾದಲ್ಲಿ ಉದ್ಧಟತನ ತೋರಿದ್ದಾರೆ. ಫೆ. 23ರಂದು ಸಮಾವೇಶದಲ್ಲಿ ತಮ್ಮನ್ನು ಭೇಟಿಯಾಗಲು ಬಂದ ಅತ್ಯಾಚಾರ ಸಂತ್ರಸ್ತೆಯ ಮಾತನ್ನೂ ಕೇಳಿಸಿಕೊಳ್ಳುವ ಗೋಜಿಗೆ ಹೋಗಿಲ್ಲ. ನ್ಯಾಯ ಕೇಳಲು ಬಂದಿದ್ದ ರಾಜಸ್ಥಾನದ ಸಂತ್ರಸ್ತೆಯ ಕುಟುಂಬವನ್ನು ನಿರ್ಲಕ್ಷಿಸಿ ಮುಂದೆ ಸಾಗಿದ್ದಾರೆ. ಭೇಟಿಯಾಗಲು ಬಂದವರನ್ನು ಪೊಲೀಸರು ಬಂಧಿಸಿದ್ದಾರೆ’ ಎಂಬ ವರದಿಯನ್ನು ರಿಪಬ್ಲಿಕ್ ಭಾರತ್ ಮಾಧ್ಯಮ ಪ್ರಕಟಿಸಿದೆ. ಪ್ರಿಯಾಂಕಾ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸ್ವಲ್ಪ ಸಮಯದ ಬಳಿಕ ಈ ವರದಿಯನ್ನು ಡಿಲೀಟ್ ಮಾಡಲಾಗಿದೆ.

ವರದಿ ಸಂಪೂರ್ಣ ತಪ್ಪಾಗಿದೆ ಎಂದು ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ವರದಿ ಮಾಡಿದೆ. ಪ್ರಿಯಾಂಕಾ ಗಾಂಧಿ ಅವರು ಮಹಾಪಂಚಾಯಿತಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುವಾಗ ಭಾಷಣವನ್ನು ಮಧ್ಯದಲ್ಲಿ ನಿಲ್ಲಿಸಿ ಅತ್ಯಾಚಾರ ಸಂತ್ರಸ್ತೆಯನ್ನು ಖುದ್ದಾಗಿ ಭೇಟಿ ಮಾಡಿದರು. ತಕ್ಷಣ ರಾಜಸ್ಥಾನ ಮುಖ್ಯಮಂತ್ರಿಗೆ ಕರೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಹೇಳಿದರು. ಎಎನ್‌ಐ ಸೇರಿ ಹಲವು ಮಾಧ್ಯಮಗಳು ಈ ವರದಿಯನ್ನು ಪ್ರಕಟಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT