ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು ಗಣೇಶ ವಿಗ್ರಹದ ಮೇಲೆ ಚಪ್ಪಲಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದು ಹರಿದಾಡುತ್ತಿದೆ. ‘ಇದು ಮತಾಂತರ ಮಾಫಿಯಾದವರ ಕೃತ್ಯದಂತೆ ಭಾಸವಾಗುತ್ತಿದೆ’ ಎಂದು ಪ್ರತಿಪಾದಿಸುತ್ತಾ ಈ ಪ್ರಕರಣಕ್ಕೆ ಕೋಮು ಆಯಾಮ ನೀಡಲು ಯತ್ನಿಸಲಾಗಿದೆ. ಈ ಪೋಸ್ಟ್ ಅನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ಆದರೆ. ಇದು ಸುಳ್ಳು ಸುದ್ದಿ.
ಘಟನೆ ನಡೆದ ಬಳಿಕ ಪೊಲೀಸರು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದಲ್ಲಿ ಗಣೇಶ ವಿಗ್ರಹದ ಮೇಲೆ ಪಾದರಕ್ಷೆ ಇಟ್ಟ ಮಹಿಳೆಯ ಬಂಧನಕ್ಕೆ ವಿಶೇಷ ತಂಡವನ್ನು ರಚಿಸಿದ್ದರು. ಪೊಲೀಸರ ತಂಡವು ಲೀಲಮ್ಮ ಎಂಬ ಮಹಿಳೆಯನ್ನು ಬಂಧಿಸಿತ್ತು. ಆಕೆ ಮಾನಸಿಕ ಅಸ್ವಸ್ಥೆ ಎಂದು ಆಕೆಯ ಕುಟುಂಬದವರು ಹೇಳಿದ್ದರು. ಅಲ್ಲದೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಕೂಡ ಹೇಳಿದ್ದರು. ‘ಪ್ರಜಾವಾಣಿ’ ಸೇರಿದಂತೆ ಎಲ್ಲ ಮಾಧ್ಯಮಗಳೂ ಇದನ್ನು ವರದಿ ಮಾಡಿವೆ. ಕೋಮು ದ್ವೇಷದಿಂದ ಈ ಘಟನೆ ನಡೆದಿರುವ ಬಗ್ಗೆ ಅವರೆಲ್ಲೂ ಹೇಳಿಕೆ ನೀಡಿಲ್ಲ. ಕೋಮು ಆಯಾಮ ದ್ವೇಷದ ವರದಿ ಮಾಧ್ಯಮಗಳಲ್ಲೂ ಪ್ರಕಟವಾಗಿಲ್ಲ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ಸುಳ್ಳು. ಪಿಟಿಐ ಕೂಡ ಈ ಬಗ್ಗೆ ಫ್ಯಾಕ್ಟ್‌ಚೆಕ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.