ADVERTISEMENT

ಫ್ಯಾಕ್ಟ್‌ ಚೆಕ್‌ | ಭಾರತ-ಚೀನಾ ಗಡಿಯಲ್ಲಿ ಟೆಂಟ್‌ಗಳು ನಿರ್ಮಾಣಗೊಂಡಿದ್ದು ನಿಜವೇ?

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 3:11 IST
Last Updated 1 ಜೂನ್ 2020, 3:11 IST
   

ಭಾರತ–ಚೀನಾಗಡಿಯಗ್ವಾಲನ್ ಕಣಿವೆಯಲ್ಲಿ ಇತ್ತೀಚೆಗೆ ಉಭಯ ದೇಶಗಳ ನಡುವೆ ಸಂಘರ್ಷದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಪೂರಕವಾಗಿ ಎಂಬಂತೆ ಚೀನಾದ ಧ್ವಜ ಹಿಡಿದ ಕೆಲವರು ಗಡಿಯಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತೀಯ ಮಾಧ್ಯಮಗಳ ವರದಿ ಪ್ರಕಾರ ಚೀನಾದ ನೂರಕ್ಕೂ ಹೆಚ್ಚು ಟೆಂಟ್‌ಗಳು ಗಡಿಯಲ್ಲಿ ನಿರ್ಮಾಣವಾಗಿವೆ ಎಂಬ ಟ್ವೀಟ್ ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೊ ಹಳೆಯದ್ದು ಎಂದು ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ವರದಿ ಮಾಡಿದೆ. ಈ ಚಿತ್ರ 2019ರ ಜುಲೈ 13ರಂದು ‘ದಿ ಸ್ಟೇಟ್ಸ್‌ಮನ್’ ಪತ್ರಿಕೆಯಲ್ಲಿ ಪ್ರಕಟವಾಗಿದೆ. ‘ಟಿಬೆಟ್ ಸನ್‌’ನಲ್ಲೂ ಪ್ರಕಟವಾಗಿದೆ. ಈಗ ಉದ್ಭವಿಸಿರುವ ಬಿಕ್ಕಟ್ಟಿಗೂ ಈ ಚಿತ್ರಕ್ಕೂ ಸಂಬಂಧವಿಲ್ಲ ಎಂಬುದು ಸ್ಪಷ್ಟಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT