ಬಹುಮಹಡಿ ಕಟ್ಟಡವೊಂದು ಹೊತ್ತಿ ಉರಿಯುತ್ತಿರುವ ವಿಡಿಯೊ ಸಾಮಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಅಹಮದಾಬಾದ್‌ನಲ್ಲಿ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನದ ಅಪಘಾತದ ವಿಡಿಯೊ ಎಂದು ಪ್ರತಿಪಾದಿಸಲಾಗುತ್ತಿದೆ. ಆದರೆ, ಇದು ಸುಳ್ಳು ಸುದ್ದಿ.
ಇನ್‌ವಿಡ್ ಟೂಲ್ ಮೂಲಕ ವಿಡಿಯೊದ ಕೀಫ್ರೇಮ್‌ಗಳನ್ನು ಪ್ರತ್ಯೇಕಿಸಿ, ಒಂದು ಕೀಫ್ರೇಮ್ ಅನ್ನು ಗೂಗಲ್ ಲೆನ್ಸ್ ಮೂಲಕ ಪರಿಶೀಲನೆ ನಡೆಸಿದಾಗ, ಒಂದೇ ವಿಡಿಯೊ ಅನ್ನು ಹಲವರು ಹಂಚಿಕೊಂಡಿರುವುದು ಕಂಡುಬಂತು. ಈ ಸಂಬಂಧ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ನ ಜೂನ್ 10ರ ಯೂ ಟ್ಯೂಬ್ ಚಾನೆಲ್‌ಗೆ ಸಂಪರ್ಕ ಕಲ್ಪಿಸಿತು. ಅದರಲ್ಲಿನ ವಿಡಿಯೊ ಮತ್ತು ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೊ ಬಹುತೇಕ ಒಂದೇ ಆಗಿರುವುದು ಕಂಡಿತು. ದೆಹಲಿಯ ದ್ವಾರಕಾ ಸೆಕ್ಟರ್ 13ರ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಗ್ನಿ ಅವಘಡ ನಡೆದಿದೆ ಎಂದು ವಿಡಿಯೊ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಿರ್ದಿಷ್ಟ ಪದಗಳ ಮೂಲಕ ಗೂಗಲ್ ಸರ್ಚ್ ಮಾಡಿದಾಗ, ಅಗ್ನಿ ಅವಘಡದ ಪೂರ್ಣ ವಿವರಗಳು ಮತ್ತು ಚಿತ್ರಗಳು ದೊರಕಿದವು. ದೆಹಲಿಯ ಅಗ್ನಿ ಅವಘಡದ ವಿಡಿಯೊ ಅನ್ನು ವಿಮಾನ ದುರಂತದ ವಿಡಿಯೊ ಎಂದು ಹಂಚಿಕೊಳ್ಳುವ ಮೂಲಕ ಕೆಲವರು ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.