ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಅವರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಕನ್ಹಯ್ಯ ಅವರು ಜುಲೈ 9ರಂದು ಬಿಹಾರದ ರ್‍ಯಾಲಿಯಲ್ಲಿ ತಮ್ಮ ಪಕ್ಷದ ಮುಖಂಡ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ ಎಂದೂ, ರ್‍ಯಾಲಿಯಲ್ಲಿ ಕನ್ಹಯ್ಯ ಮತ್ತು ಪಪ್ಪು ಯಾದವ್ ಅವರಿಗೆ ರಾಹುಲ್ ಗಾಂಧಿ ಅವರ ವಾಹನ ಹತ್ತಲು ಅವಕಾಶ ನಿರಾಕರಿಸಲಾಯಿತು ಎಂದೂ ಪೋಸ್ಟ್ ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಅದು ಸುಳ್ಳು ಸುದ್ದಿ.
ವಿಡಿಯೊದ ಕೀಫ್ರೇಮ್ ಅನ್ನು ಇನ್‌ವಿಡ್ ಟೂಲ್ ಮೂಲಕ ಪ್ರತ್ಯೇಕಿಸಿ, ಗೂಗಲ್ ಲೆನ್ಸ್ ಮೂಲಕ ಪರಿಶೀಲನೆಗೊಳಪಡಿಸಿದಾಗ, ಒಂದೇ ವಿಡಿಯೊ ಅನ್ನು ಹಲವರು ಇದೇ ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದ್ದಾರೆ ಎಂದು ತಿಳಿಯಿತು. ಅದನ್ನು ರಿವರ್ಸ್ ಇಮೇಜ್ ಸರ್ಚ್‌ಗೆ ಒಳಪಡಿಸಿದಾಗ, ಅದು ಐಎಫ್‌ಸಿ ಯೂಟ್ಯೂಬ್ ಚಾನೆಲ್‌ನಲ್ಲಿ 2023ರ ಜುಲೈ 27ರಂದು ಅಪ್‌ಲೋಡ್ ಮಾಡಲಾಗಿದ್ದ ವಿಡಿಯೊಗೆ ಸಂಪರ್ಕ ನೀಡಿತು. ಬೆಂಗಳೂರಿನಲ್ಲಿ ನಡೆದಿದ್ದ ಯುವ ಸಮಾವೇಶದಲ್ಲಿ ಭಾಗವಹಿಸಿದ್ದಾಗ ಕನ್ಹಯ್ಯ ಮಾತನಾಡಿದ ವಿಡಿಯೊ ಅದಾಗಿತ್ತು. ಹಳೆಯ ವಿಡಿಯೊ ಅನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.