ಸಾಮಾಜಿಕ ಜಾಲತಾಣದಲ್ಲಿ ಕೆಲವರು ಗಾಸಿಗೊಳಿಸುವಂಥ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮಧ್ಯವಯಸ್ಕರೊಬ್ಬರನ್ನು ಬೀದಿಯಲ್ಲಿ ನೇಣು ಹಾಕಿರುವುದನ್ನು, ರಸ್ತೆ ಮೇಲೆ ಮೃತದೇಹವೊಂದು ಬಿದ್ದಿರುವುದನ್ನು ವಿಡಿಯೊಗಳಲ್ಲಿ ತೋರಿಸಲಾಗಿದೆ. ಇವು ಗುಂಪು ಹಲ್ಲೆಗೆ ಸಂಬಂಧಿಸಿದ ವಿಡಿಯೊಗಳು ಎಂದು ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಉಲ್ಲೇಖಿಸುತ್ತಿದ್ದು, ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನದಿಂದ ಕೆಳಗಿಳಿದ ನಂತರ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ಮುಸ್ಲಿಮರು ಗುಂಪು ಹಲ್ಲೆ ಆರಂಭಿಸಿದ್ದಾರೆ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.