ADVERTISEMENT

FactCheck: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಲಸಿಕೆ ಆಯ್ಕೆ ನೀಡಲಾಗಿದೆಯೇ?

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 19:30 IST
Last Updated 3 ಮಾರ್ಚ್ 2021, 19:30 IST
ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಲಸಿಕೆಯ ಆಯ್ಕೆ ಇಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ
ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಲಸಿಕೆಯ ಆಯ್ಕೆ ಇಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ   

ಕೋವಿಡ್ ಲಸಿಕೆಯ ಎರಡನೇ ಹಂತದ ಅಭಿಯಾನ ಶುರುವಾಗಿದೆ. ಪ್ರಧಾನಿ, ರಾಷ್ಟ್ರಪತಿ, ಸಚಿವರು, ಶಾಸಕರು ಸೇರಿದಂತೆ ಗಣ್ಯರು ಲಸಿಕೆ ಪಡೆಯುತ್ತಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತಮಗೆ ಯಾವ ಲಸಿಕೆ ಬೇಕು ಎಂದು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್‌ನಲ್ಲಿ ಒಂದನ್ನು ಆರಿಸಿಕೊಳ್ಳಬಹುದು ಎಂದು ರಾಷ್ಟ್ರೀಯ ಸುದ್ದಿಮಾಧ್ಯಮವೊಂದು ಟ್ವೀಟ್ ಮಾಡಿದೆ. ಬಳಿಕ ಅದನ್ನು ಅಳಿಸಿಹಾಕಿದೆ.

ಲಸಿಕೆಯಲ್ಲಿ ಆಯ್ಕೆ ಅವಕಾಶ ನೀಡಲಾಗಿಲ್ಲ ಎಂದು ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ವರದಿ ಮಾಡಿದೆ. ಎಎನ್‌ಐ ಟ್ವೀಟ್‌ಗಳನ್ನು ಆಧರಿಸಿ ಈ ಸ್ಪಷ್ಟನೆ ನೀಡಿದೆ. ‘ಕೋವಿನ್ ಪೋರ್ಟಲ್ ಮೂಲಕವೇ ಎಲ್ಲರೂ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಸಮಯ, ಸ್ಥಳ ನಿಗದಿಯಾಗುತ್ತದೆ. ನ್ಯಾಯಾಧೀಶರಿಗೆ ಲಸಿಕೆ ಆಯ್ಕೆಯ ಅವಕಾಶ ಇಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT