ADVERTISEMENT

FACT CHECK: ಇವಿಎಂ ನಿಷೇಧ ಸುದ್ದಿ ಸುಳ್ಳು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 20:04 IST
Last Updated 28 ಮಾರ್ಚ್ 2023, 20:04 IST
FACT CHECK: ಇವಿಎಂ ನಿಷೇಧ ಸುದ್ದಿ ಸುಳ್ಳು
FACT CHECK: ಇವಿಎಂ ನಿಷೇಧ ಸುದ್ದಿ ಸುಳ್ಳು   

ದೇಶದಲ್ಲಿ ಇನ್ನು ಮುಂದೆ ನಡೆಯುವ ಎಲ್ಲ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಹೇಳಲಾಗುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ‘ಇಂಡಿಯಾ ಅಪ್‌ಡೇಟ್’ ಎಂಬ ಯೂಟ್ಯೂಬ್ ಚಾನಲ್‌ನಲ್ಲಿ ಮೂರು ತಿಂಗಳ ಹಿಂದೆಯೇ ಇಂತಹ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ. ‘ಕೊನೆಗೂ, 20 ವರ್ಷಗಳವರೆಗೆ ಇವಿಎಂ ಬಳಕೆಗೆ ನಿಷೇಧ ಹೇರಲಾಗಿದೆ’ ಎಂದು ಬ್ರೇಕಿಂಗ್ ನ್ಯೂಸ್ ರೂಪದಲ್ಲಿ ಬಿತ್ತರಿಸಲಾಗಿದೆ. ಹಲವು ಸಾಮಾಜಿಕ ಜಾಲತಾಣ ಬಳಕೆದಾರರೂ ಈ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದು ಸುಳ್ಳು.

ಇವಿಎಂ ನಿಷೇಧ ಕುರಿತಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಕೇಂದ್ರ ಸರ್ಕಾರದ ಪಿಐಬಿ ತಿಳಿಸಿದೆ. ‘ಇಂಡಿಯಾ ಅಪ್‌ಡೇಟ್’ ಎಂಬ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರವಾಗಿರುವ ಸುದ್ದಿಗೆ ಯಾವುದೇ ಆಧಾರ ಇಲ್ಲ. ಇವಿಎಂ ಬಳಕೆಯನ್ನು ನಿರ್ಬಂಧಿಸುವ ಕುರಿತಂತೆ ಯಾವುದೇ ರೀತಿಯ ಪ್ರಕಟಣೆ ಹೊರಬಿದ್ದಿಲ್ಲ ಎಂದು ಸ್ಪಷ್ಟಪಡಿಸಿರುವ ಪಿಐಬಿ, ಇಂತಹ ಅನುಮಾನಾಸ್ಪದ ಪೋಸ್ಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಜನರಿಗೆ ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT