ADVERTISEMENT

Fact Check| ಪಾಕಿಸ್ತಾನದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಭಾರಿ ಭದ್ರತೆ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಸೆಪ್ಟೆಂಬರ್ 2021, 16:26 IST
Last Updated 26 ಸೆಪ್ಟೆಂಬರ್ 2021, 16:26 IST
   

ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಭದ್ರತೆಯ ಕಾರಣ ನೀಡಿ ಪಾಕಿಸ್ತಾನದ ಪ್ರವಾಸವನ್ನು ರದ್ದುಗೊಳಿಸಿದೆ. ಇದಕ್ಕೆ ಪಾಕಿಸ್ತಾನ ಆಕ್ರೋಶ ವ್ಯಕ್ತಪಡಿಸಿದೆ. ಈ ಮಧ್ಯೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯನ್ನು ಬಿಂಬಿಸುವ ಚಿತ್ರವೊಂದು ವೈರಲ್ ಆಗಿದೆ. ನ್ಯೂಜಿಲೆಂಡ್ ತಂಡಕ್ಕೆ ಪಾಕಿಸ್ತಾನ ಈ ರೀತಿಯ ಭದ್ರತಾ ವ್ಯವಸ್ಥೆ ಕಲ್ಪಿಸಿದೆ ಎಂದು ಉಲ್ಲೇಖಿಸಲಾಗಿದೆ. ‘ಇಷ್ಟು ಭದ್ರತೆ ಸಾಕಾಗುವುದಿಲ್ಲವೇ’ ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

2019ರಲ್ಲಿ ಶ್ರೀಲಂಕಾ ತಂಡವು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಸೆರೆಹಿಡಿದ ಚಿತ್ರ ಇದು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಪರಿಶೀಲಿಸಲಾಗಿದೆ. 2009ರಲ್ಲಿ ಶ್ರೀಲಂಕಾ ತಂಡದ ಮೇಲೆ ಲಾಹೋರ್‌ನಲ್ಲಿ ಭಯೋತ್ಪಾದಕ ದಾಳಿಯ ಯತ್ನ ನಡೆದಿತ್ತು. ಹತ್ತು ವರ್ಷಗಳ ಬಳಿಕ ಮತ್ತೆ ಪಾಕ್‌ಗೆ ಭೇಟಿ ನೀಡಿದ ತಂಡಕ್ಕೆ ಭಾರಿ ಭದ್ರತೆ ಒದಗಿಸಲಾಗಿತ್ತು. ಈ ಚಿತ್ರವನ್ನು ನ್ಯೂಜಿಲೆಂಡ್ ತಂಡಕ್ಕೆ ನೀಡಿದ ಭದ್ರತೆ ಎಂದು ತಪ್ಪಾಗಿ ಬಿಂಬಿಸಲಾಗಿದೆ. ನ್ಯೂಜಿಲೆಂಡ್ ತಂಡವು ಪಾಕಿಸ್ತಾನ ಪ್ರವಾಸಕ್ಕೆ ತೆರಳಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT