ADVERTISEMENT

Fact Check: ‘ಪ್ರಧಾನಮಂತ್ರಿ ಉಜ್ವಲ ಫೈನಾನ್ಸ್ ಯೋಜನೆ’ ಅಡಿ ಸಾಲ ನೀಡುವುದಿಲ್ಲ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 19:30 IST
Last Updated 14 ಡಿಸೆಂಬರ್ 2020, 19:30 IST
ಫ್ಯಾಕ್ಟ್‌ ಚೆಕ್‌
ಫ್ಯಾಕ್ಟ್‌ ಚೆಕ್‌   

ಪ್ರಧಾನಮಂತ್ರಿ ಉಜ್ವಲ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಬಡತನದ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಹಿಳೆಯರಿಗೆ ಉಚಿತವಾಗಿ ಎಲ್‌ಪಿಜಿ ಸಂಪರ್ಕ ನೀಡುವ ಉದ್ದೇಶ ಹೊಂದಿದೆ. ಆದರೆ ‘ಪ್ರಧಾನಮಂತ್ರಿ ಉಜ್ವಲ ಫೈನಾನ್ಸ್ ಯೋಜನೆ’ ಅಡಿಯಲ್ಲಿ ಸಾಲ ನೀಡಲಾಗುತ್ತಿದ್ದು, ಸಾಲಕ್ಕೆ ನೀಡಿದ ಅನುಮೋದನೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಸಾಲದ ಪ್ರಕ್ರಿಯೆ ಶುಲ್ಕವಾಗಿ ₹3,200 ಪಾವತಿಸಲು ಸೂಚಿಸಲಾಗಿದೆ.

ಈ ಬಗ್ಗೆ ಪರಿಶೀಲನೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತಂಡಕ್ಕೆ ಸಾಲ ಅನುಮೋದನೆ ಪತ್ರ ನಕಲಿ ಎಂಬುದು ಗೊತ್ತಾಗಿದೆ. ಕೇಂದ್ರ ಸರ್ಕಾರವು ಇಂತಹ ಯಾವುದೇ ಹಣಕಾಸು ಯೋಜನೆಯನ್ನು ಆರಂಭಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT