ಕೋವಿಡ್–19 ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ಸಂಗ್ರಹಿಸಲು ಆರಂಭಿಸಲಾದ ‘ಪಿಎಂ ಕೇರ್ಸ್’ ನಿಧಿಗೆ ರಷ್ಯಾ ಸರ್ಕಾರವು ₹ 15 ಕೋಟಿ ದೇಣಿಗೆ ನೀಡಿದೆ ಎಂಬ ಸುದ್ದಿ ಎರಡು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ.
ರಷ್ಯಾದಿಂದ ಪಿಎಂ ಕೇರ್ಸ್ ನಿಧಿಗೆ ಸುಮಾರು ₹ 15.30 ಕೋಟಿ ರೂಪಾಯಿ ಬರುತ್ತಿರುವುದು ನಿಜ, ಆದರೆ ಹಣ ಇನ್ನೂ ಸಂದಾಯವಾಗಿಲ್ಲ. ಎಂದು ಸರ್ಕಾರದ ಮೂಲಗಳು ಖಚಿತಪಡಿಸಿವೆ. ಈ ಹಣವನ್ನು ರಷ್ಯಾ ಸರ್ಕಾರ ನೇರವಾಗಿ ನೀಡುತ್ತಿಲ್ಲ. ಬದಲಿಗೆ, ಸರ್ಕಾರಿ ಸ್ವಾಮ್ಯದ ರಕ್ಷಣಾ ಸಾಮಗ್ರಿ ರಫ್ತು ಕಂಪನಿಯು ನೀಡುತ್ತಿದೆ. ಈ ಸುದ್ದಿ ನಿಜ.
*****
ಉತ್ತರಪ್ರದೇಶದಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರ ಸ್ವೀಕರಿಸಲು ಕ್ವಾರಂಟೈನ್ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬ ನಿರಾಕರಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ ಎಂಬ ಸುದ್ದಿ ವೈರಲ್ ಆಗಿದೆ.
ಈ ಘಟನೆ ನಡೆದಿರುವುದು ನಿಜ. ಉತ್ತರಪ್ರದೇಶದ ಖುಷಿನಗರದಲ್ಲಿ ಈ ಘಟನೆ ನಡೆಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.