ನವದೆಹಲಿ: ಶ್ರೀನಗರದ ವಾಯುನೆಲೆ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ಶೆಲ್ ಮತ್ತು ಗುಂಡಿನ ದಾಳಿ ನಡೆಸುವ ಮೂಲಕ ಭಾರತ ಸೇನೆಯ ಎರಡು ಚೆಕ್‌ಪೋಸ್ಟ್‌ಗಳನ್ನು ನಾಶಪಡಿಸಿದ್ದು, ಭಾರಿ ಸಾವುನೋವುಗಳು ಸಂಭವಿಸಿವೆ ಎಂಬುದು ಸುಳ್ಳು. ಪಾಕಿಸ್ತಾನದ ಪರವಿರುವ ಕೆಲ ಸಾಮಾಜಿಕ ಜಾಲತಾಣ ಖಾತೆಗಳು ಈ ಸುಳ್ಳು ಸುದ್ದಿಯನ್ನು ಪಸರಿಸುತ್ತಿವೆ ಎಂದು ಸರ್ಕಾರ ಬುಧವಾರ ಹೇಳಿದೆ.
ಪಿಐಬಿ ಸತ್ಯಶೋಧನ (ಫ್ಯಾಕ್ಟ್‌ಚೆಕ್) ವಿಭಾಗವು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೊ ಹಳೆಯದಾಗಿದ್ದು, ಇದು ಭಾರತದ್ದಲ್ಲ. ಈ ವಿಡಿಯೊ 2024ರಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಜನಾಂಗೀಯ ಘರ್ಷಣೆಯದ್ದಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಈ ವಿಡಿಯೊ ಜತೆಗೆ ಹಂಚಿಕೊಳ್ಳಲಾದ ಫೋಟೊವು 2025ರ ಮಾರ್ಚ್‌ನಲ್ಲಿ ಉತ್ತರ ಐರ್ಲೆಂಡ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದ್ದಾಗಿದೆ ಎಂದು ಪಿಐಬಿ ಖಚಿತಪಡಿಸಿದೆ.
ಪಾಕಿಸ್ತಾನವು ಭಾರತೀಯ ಬ್ರಿಗೇಡ್ ಪ್ರಧಾನ ಕಚೇರಿಯನ್ನು ನಾಶಪಡಿಸಿದೆ ಎಂದು ಸಾಮಾಜಿಕ ಮಾಧ್ಯಮಗಳು ಸುಳ್ಳು ಪೋಸ್ಟ್‌ಗಳನ್ನು ಪ್ರಕಟಿಸುತ್ತಿವೆ ಎಂದೂ ಪಿಐಬಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.