ಕೋವಿಡ್ ಹಾವಳಿಯಿಂದಾಗಿ ಆರೋಗ್ಯ ಸೇವೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ‘ಸ್ವಾಸ್ಥ್ಯ ಅವಂ ಜನ ಕಲ್ಯಾಣ ಸಂಸ್ಥಾನ’ ಎಂಬ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಿದೆ. ಇದು ಅತ್ಯಂತ ಶ್ರೇಷ್ಠ ಗುಣಮಟ್ಟದ ಸಂಸ್ಥೆಯಾಗಿದ್ದು,ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿ ಕೆಲಸ ನಿರ್ವಹಿಸುತ್ತದೆ. ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಇದನ್ನು ನಿರ್ಮಿಸಲಾಗಿದೆ ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶ್ರೇಷ್ಠದರ್ಜೆಯ ಆರೋಗ್ಯ ಸಂಸ್ಥೆ ಸ್ಥಾಪಿಸಿದ ಸುದ್ದಿಯನ್ನು ಪಿಐಬಿ ಫ್ಯಾಕ್ಟ್ ಚೆಕ್ ಘಟಕ ಅಲ್ಲಗಳೆದಿದೆ. ಇಂತಹ ಯಾವುದೇ ಸಂಸ್ಥೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.