ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಅಮೆರಿಕದಲ್ಲಿ ವಲಸಿಗರಿಗೆ ಜನಿಸಿದ ಮಕ್ಕಳು ಹುಟ್ಟಿನಿಂದಲೇ ಅಲ್ಲಿನ ಪೌರತ್ವ ಪಡೆಯುವ ನೀತಿಯನ್ನು ರದ್ದುಗೊಳಿಸಿ ಹೊರಡಿಸಿರುವ ಕಾರ್ಯಾದೇಶ ಭಾರತೀಯರನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು.
ನಿರ್ದಿಷ್ಟ ಪದಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದಾಗ ಇದೇ ಪೋಸ್ಟ್ ಅನ್ನು ಹಲವರು ಹಂಚಿಕೊಂಡಿರುವುದು ಕಂಡು ಬಂತು. ಟ್ರಂಪ್ ಅವರು ಸಹಿ ಹಾಕಿದ ಕಾರ್ಯಾದೇಶವನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನಿರ್ದಿಷ್ಟವಾಗಿ ಭಾರತದವರು ಎಂದು ಉಲ್ಲೇಖಿಸಿಲ್ಲ. ಅಕ್ರಮವಾಗಿ ಅಮೆರಿಕ ಪ್ರವೇಶಿಸಿದವರು ಮತ್ತು ಅಧಿಕೃತವಾಗಿ ವಲಸೆ ಬಂದವರಿಗೆ ಇದು ಅನ್ವಯವಾಗುತ್ತದೆ ಎಂದು ಅದರಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ಇದಲ್ಲದೇ, ಮಾಧ್ಯಮಗಳಲ್ಲಿ ಬಂದ ವರದಿಗಳು ಕೂಡ ಭಾರತೀಯರು ಸೇರಿದಂತೆ ಎಲ್ಲ ವಲಸಿಗರಿಗೆ ಈ ಕಾರ್ಯಾದೇಶ ಅನ್ವಯವಾಗುತ್ತದೆ ಎಂದು ಹೇಳಿವೆ ಎಂಬುದಾಗಿ ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.