ADVERTISEMENT

Fact Check| ಆಹಾರ ಉದ್ದಿಮೆಗಳು ಎಫ್ಎಸ್ಎಸ್‌ಎಐ ಪರವಾನಗಿ ಪಡೆಯಬೇಕೆ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ನವೆಂಬರ್ 2020, 19:30 IST
Last Updated 1 ನವೆಂಬರ್ 2020, 19:30 IST
ವರದಿಯ ಪತ್ರಿಕಾ ತುಣುಕು
ವರದಿಯ ಪತ್ರಿಕಾ ತುಣುಕು    

ಆಹಾರಕ್ಕೆ ಸಂಬಂಧಿಸಿದ ವ್ಯವಹಾರ ನಡೆಸುವ ಎಲ್ಲ ಉದ್ಯಮ ಸಂಸ್ಥೆಗಳು ‘ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ’ದಿಂದ (ಎಫ್ಎಸ್ಎಸ್‌ಎಐ) ಪರವಾನಗಿ ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಮುಂದಿನ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ – ಇಂತಹ ಮಾಹಿತಿ ಇರುವ ಸುದ್ದಿಯು ಹಿಂದಿ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದು, ವ್ಯಾಪಾರಿಗಳನ್ನು ಗೊಂದಲಕ್ಕೆ ಸಿಲುಕಿಸಿದೆ.

ಪತ್ರಿಕೆಯಲ್ಲಿ ಪ್ರಕಟವಾಗಿರುವ ಸುದ್ದಿಯು ಸಂಪೂರ್ಣ ಸತ್ಯವಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಘಟಕ ತಿಳಿಸಿದೆ. ವರ್ಷಕ್ಕೆ ₹20 ಕೋಟಿ ವಹಿವಾಟು ನಡೆಸುವ ಸಂಸ್ಥೆಗಳು ಮಾತ್ರಎಫ್ಎಸ್ಎಸ್‌ಎಐನಿಂದ ಪರವಾನಗಿ ಪಡೆಯಬೇಕು ಎಂಬ ನಿಯಮ ಇದೆ. ಇದಕ್ಕೂ ಕಡಿಮೆ ಮೊತ್ತದ ವಹಿವಾಟು ನಡೆಸುವ ವ್ಯಾಪಾರಿಗಳು ಪರವಾನಗಿ ಪಡಯುವ ಅಗತ್ಯವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT