ADVERTISEMENT

ಲೋಕಸಭೆ ಸ್ಪೀಕರ್ ಮಗಳು ಉತ್ತೀರ್ಣ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆಯೇ?

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 19:30 IST
Last Updated 10 ಜನವರಿ 2021, 19:30 IST
   

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಮಗಳು ಅಂಜಲಿ ಬಿರ್ಲಾ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ನಲ್ಲಿದೆ. ‘ಯಾವುದೇ ಪರೀಕ್ಷೆ, ಸಂದರ್ಶನ ಇಲ್ಲದೇ ಉತ್ತೀರ್ಣರಾಗಿದ್ದಾರೆ’. ‘ಕೇಳಿದ್ದು ಒಂದೇ ಪ್ರಶ್ನೆ. ನಿಮ್ಮ ತಂದೆ ಏನು ಮಾಡುತ್ತಿದ್ದಾರೆ’. ‘ಹಿಂಬಾಗಿಲಿನ ಮೂಲಕ ಒಳಬರುವವರಿಗೆ 90 ಸೀಟು ನಿಗದಿಯಾಗಿರುತ್ತವೆ’ ಎಂಬಿತ್ಯಾದಿ ಮಾತುಗಳು ವೇದಿಕೆಗಳಲ್ಲಿ ಚರ್ಚೆಯಾಗುತ್ತಿದೆ.

ಈ ಬಗ್ಗೆ ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ಪರಾಮರ್ಶೆ ನಡೆಸಿದೆ. ಯುಪಿಎಸ್‌ಸಿ ವೆಬ್‌ಸೈಟ್ ಬಿಡುಗಡೆ ಮಾಡಿದ ಆಯ್ಕೆಯಾವರ ಪಟ್ಟಿಯಲ್ಲಿ ಅಂಜಲಿ ಅವರ ಹೆಸರಿದೆ. ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಹಾಗೂ ಸಂದರ್ಶನಕ್ಕೆ ಆಯ್ಕೆಯಾದವರ ಪಟ್ಟಿಯಲ್ಲೂ ಅವರ ಹೆಸರಿದೆ. ಅಂಜಲಿ ಅವರನ್ನು ಖುದ್ದಾಗಿ ಸಂಪರ್ಕಿಸಿದಾಗ, ಯುಪಿಎಸ್‌ಸಿಯ ಎಲ್ಲ ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಯೇ ಆಯ್ಕೆಯಾಗಿರುವುದಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT