
ಭಾರತ ಕ್ರಿಕೆಟ್ ತಂಡದ ಸದಸ್ಯ ಮೊಹಮ್ಮದ್ ಸಿರಾಜ್ ಅವರು ರಾಜ್‌ಕೋಟ್ ಕ್ರೀಡಾಂಗಣದಲ್ಲಿ ನಮಾಜ್ ಮಾಡುತ್ತಿರುವುದು ಮತ್ತು ಅವರ ಹಿಂದಿನಿಂದ ತಂಡದ ಇತರ ಸದಸ್ಯರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ಕೋಚ್ ಗೌತಮ್ ಗಂಭೀರ್ ಹಾಗೂ ಇತರರು ಅದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿರುವ ಚಿತ್ರವನ್ನು ‘za cricket life’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಜ. 15ರಂದು ಪೋಸ್ಟ್ ಮಾಡಲಾಗಿದೆ. ಆದರೆ, ಇದು ಸುಳ್ಳು.
ಚಿತ್ರವನ್ನು ಗೂಗಲ್ ಲೆನ್ಸ್‌ನಲ್ಲಿ ಹಾಕಿದಾಗ, ಹಲವರು ಇದೇ ಪೋಸ್ಟ್ ಅನ್ನು ಹಂಚಿಕೊಂಡಿರುವುದು ಕಂಡು ಬಂತು. ಮುಂದಿನ ಹಂತದಲ್ಲಿ ನಿರ್ದಿಷ್ಟ ಪದಗಳನ್ನು ಬಳಸಿ ಹುಡುಕಾಟ ನಡೆಸಿದಾಗ, ಮೈದಾನದಲ್ಲಿ ಸಿರಾಜ್ ನಮಾಜ್ ಮಾಡಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ, ವರದಿಗಳು ಸಿಗಲಿಲ್ಲ. ಸಿರಾಜ್ ಮತ್ತು ಬಿಸಿಸಿಐನ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಲ್ಲಿ ಪರಿಶೀಲಿಸಿದಾಗಲೂ ಈ ಬಗ್ಗೆ ಯಾವುದೇ ಪೋಸ್ಟ್ ಕಂಡು ಬರಲಿಲ್ಲ. ಚಿತ್ರವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಸಿರಾಜ್ ಅವರ ಜರ್ಸಿಯಲ್ಲಿ ಡ್ರೀಮ್11 ಲಾಂಛನ ಇತ್ತು. ಈಗ ಅಪೋಲೊ ಟೈರ್ಸ್ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವ ಹೊಂದಿದೆ. ರಾಜ್‌ಕೋಟ್‌ನಲ್ಲಿ 14ರಂದು ನಡೆದ ಪಂದ್ಯದಲ್ಲಿ ಭಾರತ ತಂಡದಲ್ಲಿ ಜಸ್ಪ್ರೀತ್ ಬೂಮ್ರಾ ಇರಲಿಲ್ಲ. ಅಲ್ಲದೇ, ಈ ಚಿತ್ರವು ಡಿಜಿಟಲ್ ತಂತ್ರಜ್ಞಾನದಲ್ಲಿ ಸೃಷ್ಟಿಸಿರುವ ಚಿತ್ರಗಳ್ನು ಹೋಲುತ್ತಿದ್ದರಿಂದ ಎಐ ಪತ್ತೆ ಟೂಲ್ ಹೈವ್ ಮಾಡರೇಷನ್ ಮೂಲಕ ಅದನ್ನು ಪರಿಶೀಲನೆಗೆ ಒಳಪಡಿಸಿದಾಗ, ಅದು ಎಐ ಚಿತ್ರ ಎಂಬುದು ದೃಢಪಟ್ಟಿತು ಎಂದು ಪಿಟಿಐ ಫ್ಯಾಕ್ಟ್‌ಚೆಕ್ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.