ADVERTISEMENT

ಫ್ಯಾಕ್ಟ್‌ ಚೆಕ್‌ | ಇಶಾ ಫೌಂಡೇಶನ್‌ನಲ್ಲಿ ಒಂದು ಕೊರೊನಾ ಪ್ರಕರಣವೂ ಕಂಡುಬಂದಿಲ್ಲ

​ಪ್ರಜಾವಾಣಿ ವಾರ್ತೆ
Published 5 ಮೇ 2020, 19:45 IST
Last Updated 5 ಮೇ 2020, 19:45 IST
ಫ್ಯಾಕ್ಟ್‌ ಚೆಕ್‌
ಫ್ಯಾಕ್ಟ್‌ ಚೆಕ್‌   

‘ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾಫೌಂಡೇಶನ್‌ ವತಿಯಿಂದ ಮಾರ್ಚ್‌ ತಿಂಗಳಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಅದರಲ್ಲಿ 150ಕ್ಕೂ ಹೆಚ್ಚು ಮಂದಿ ವಿದೇಶಿಯರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವು ತಮಿಳುನಾಡಿನಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ಹರಡಲು ಕಾರಣವಾಗಿದೆ. ಈಗ ಅವರೆಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ದೆಹಲಿಯ ತಬ್ಲೀಗ್‌ ಜಮಾತ್‌ ಕಾರ್ಯಕ್ರಮದ ಬಗ್ಗೆ ಸುದ್ದಿ ಮಾಡಿದವರು ಈ ವಿಚಾರದಲ್ಲಿ ಸುಮ್ಮನಿದ್ದಾರೆ’ ಎಂಬ ಸುದ್ದಿಯೊಂದು ಫೇಸ್‌ಬುಕ್‌ನಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದೆ.

ಫೆಬ್ರುವರಿ 21ರಂದು ಶಿವರಾತ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದನ್ನು ಬಿಟ್ಟರೆ, ಈಶ ಫೌಂಡೇಶನ್‌ ವತಿಯಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮ ಆಯೋಜಿಸಲಾಗಿಲ್ಲ. ಸುದ್ದಿಯ ಜತೆಗೆ ಹರಿದಾಡುತ್ತಿರುವ ಚಿತ್ರ ಹಳೆಯ ಕಾರ್ಯಕ್ರಮದ್ದು. ಈಶ ಫೌಂಡೇಶನ್‌ನಲ್ಲಿ ಕೊರೊನಾ ಸೋಂಕಿನ ಒಂದು ಪ್ರಕರಣವೂ ಕಂಡುಬಂದಿಲ್ಲ. ಇದನ್ನು ಜಿಲ್ಲಾಧಿಕಾರಿಯೂ ದೃಢಪಡಿಸಿದ್ದಾರೆ ಎಂದು ಈಶ ಫೌಂಡೇಶನ್‌ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT