ADVERTISEMENT

ಫ್ಯಾಕ್ಟ್ ಚೆಕ್ | ಮೋದಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್ ಚೆಕ್
Published 8 ಏಪ್ರಿಲ್ 2025, 23:30 IST
Last Updated 8 ಏಪ್ರಿಲ್ 2025, 23:30 IST
.
.   

ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ ಮತ್ತು ಸೆ.16ರಂದು ಪ್ರಧಾನಿಯಾಗಿ ಅವರು ಕೊನೆಯ ದಿನ ಕಾರ್ಯನಿರ್ವಹಿಸಲಿದ್ದಾರೆ ಎಂದು ಸುದ್ದಿ ಚಾನೆಲ್‌ ‘ಟೈಮ್ಸ್‌ ನೌ’ ವರದಿ ಮಾಡಿದೆ ಎಂಬ ಪ್ರತಿಪಾದನೆಯೊಂದಿಗೆ ‘ಎಕ್ಸ್‌’ ಬಳಕೆದಾರರೊಬ್ಬರು ಗ್ರಾಫಿಕ್‌ ಒಂದನ್ನು ಇತ್ತೀಚೆಗೆ ಪೋಸ್ಟ್‌ ಮಾಡಿದ್ದರು. ಆ ಗ್ರಾಫಿಕ್‌ನಲ್ಲಿ, ಮೋದಿ ಅವರು ನಾಗ್ಪುರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಭೇಟಿ ನೀಡಿದ ನಂತರ ಈ ಘೋಷಣೆ ಮಾಡಿದ್ದಾರೆ ಎಂಬ ಒಕ್ಕಣೆಯೂ ಇದೆ. ಆದರೆ, ಇದು ಸುಳ್ಳು ಸುದ್ದಿ. 

ಮೋದಿ ಅವರು ಆರ್‌ಎಸ್‌ಎಸ್‌ ಕಚೇರಿಗೆ ನೀಡಿದ ಭೇಟಿ ಕುರಿತು ನಿರ್ದಿಷ್ಟ ಪದಗಳನ್ನು ಬಳಸಿ ಹುಡುಕಾಟ ನಡೆಸಿದಾಗ, ಯಾವ ವರದಿಯಲ್ಲೂ ಮೋದಿ ಅವರ ನಿವೃತ್ತಿ ಬಗ್ಗೆ ಪ್ರಸ್ತಾಪವಿರಲಿಲ್ಲ. ಟೌಮ್ಸ್‌ ನೌ ವೆಬ್‌ಸೈಟ್‌ನಲ್ಲಿ ಈ ಕುರಿತಾಗಿ ಹುಡುಕಿದಾಗಲೂ ಮೋದಿ ರಾಜಕೀಯ ನಿವೃತ್ತಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಸಿಗಲಿಲ್ಲ. ಶಿವಸೇನಾ ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್‌ ರಾವುತ್ ಅವರು ಸೆ.17ರಂದು ಪ್ರಧಾನಿಯವರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ ನಂತರ ಈ ಬಗ್ಗೆ ಚರ್ಚೆ ಶುರುವಾಗಿತ್ತು. ರಾವುತ್ ಹೇಳಿಕೆ ಕುರಿತು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್‌ ಬವಾಂಕುಲೆ 75 ವರ್ಷಕ್ಕೆ ನಿವೃತ್ತರಾಗಬೇಕು ಎಂಬ ನಿಯಮ ಇಲ್ಲ ಎಂದು ಸ್ಪಷ್ಟನೆ ನೀಡಿರುವುದು ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ‘ಟೌಮ್ಸ್‌ ನೌ’ ಚಾನೆಲ್‌ ಸಂಪರ್ಕಿಸಿದಾಗ, ‘ಆ ವರದಿಯನ್ನು ನಾವು ಮಾಡಿಲ್ಲ’ ಎಂಬ ಸ್ಪಷ್ಟನೆಯನ್ನೂ ನೀಡಿದೆ ಎಂದು ಪಿಟಿಐ ಫ್ಯಾಕ್ಟ್‌ ಚೆಕ್‌ ವರದಿ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT