ADVERTISEMENT

Factcheck: ರಿಜ್ವಿ ಹಾದಿಯಲ್ಲೇ 34ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರ?

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 19:49 IST
Last Updated 16 ಡಿಸೆಂಬರ್ 2021, 19:49 IST
   

ಕೇಸರಿ ವಸ್ತ್ರ ಧರಿಸಿರುವ ಹಿಂದೂ ವ್ಯಕ್ತಿಯ ಸುತ್ತ ಮುಸ್ಲಿಮರ ಗುಂಪು ನಿಂತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿವೆ ಎಂದು ಹೇಳಲಾಗಿದೆ. ಉತ್ತರ ಪ್ರದೇಶದ ಶಿಯಾ ವಕ್ಫ್‌ ಮಂಡಳಿ ಅಧ್ಯಕ್ಷ ಸಯ್ಯದ್‌ ವಸೀಂ ರಿಜ್ವಿ ಅವರು ಇತ್ತೀಚೆಗಷ್ಟೇ ಹಿಂದೂ ಧರ್ಮಕ್ಕೆ ಮತಾಂತರಗೊಂಡರು. ಅವರ ಹಾದಿಯಲ್ಲೇ ಈ 34 ಕುಟುಂಬಗಳೂ ಹಿಂದೂ ಧರ್ಮಕ್ಕೆ ಮತಾಂತರಗೊಂಡವು. ‘ಇಸ್ಲಾಂ ಧರ್ಮ ತೊರೆಯಲು ಈಗ ಜನರು ಹೆದರುತ್ತಿಲ್ಲ. ಸ್ವಯಂಪ್ರೇರಿತವಾಗಿ ಸನಾತನ ಧರ್ಮಕ್ಕೆ ಮತಾಂತರವಾಗುತ್ತಿದ್ದಾರೆ’ ಎಂದು ಹೇಳಲಾಗಿದೆ.

ಇದು 2016ರಲ್ಲಿ ತೆಗೆಯಲಾಗಿರುವ ಚಿತ್ರ. ‘ಅಮರ್‌ ಉಜಾಲ’ ಎಂಬ ಪತ್ರಿಕೆಯಲ್ಲಿ ಈ ಚಿತ್ರ ಪ್ರಕಟವಾಗಿದೆ ಎಂದು ‘ದಿ ಕ್ವಿಂಟ್‌’ ವರದಿ ಮಾಡಿದೆ. 2016ರ ಸೆಪ್ಟೆಂಬರ್‌ನಲ್ಲಿ ಭಯೋತ್ಪಾದಕರು ‘ಉರಿ’ಯಲ್ಲಿ ದಾಳಿ ನಡೆಸಿ ಭಾರತೀಯ ಸೈನಿಕರನ್ನು ಹತ್ಯೆಗೈದಿದ್ದನ್ನು ವಿರೋಧಿಸಿ ಉತ್ತರ ಪ್ರದೇಶದ ಮಥುರಾದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಮತ್ತು ಮುಸ್ಲಿಂ ಧರ್ಮೀಯರು ಭಯೋತ್ಪಾದನೆ ವಿರುದ್ಧ ಒಟ್ಟಾಗಿದ್ದಾರೆ ಎಂಬ ಸಂದೇಶ ನೀಡಲು ಎರಡೂ ಸಮುದಾಯಗಳ ಧಾರ್ಮಿಕ ಮುಖಂಡರು ಈ ಪ್ರತಿಭಟನೆಯಲ್ಲಿ ಹಾಜರಿದ್ದರು ಎಂದು ಅಮರ್‌ ಉಜಾಲ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT