ಕರಿ ಕೋಟು ತೊಟ್ಟಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣವೊಂದರ ವಿಚಾರಣೆಗೆಂದು ಉತ್ತರ ಪ್ರದೇಶದ ಲಖನೌ ನ್ಯಾಯಾಲಯಕ್ಕೆ ಬಂದಿದ್ದ ಪ್ರತಿವಾದಿಯೊಂದಿಗೆ (ರಾಹುಲ್ ಗಾಂಧಿ) ನ್ಯಾಯಾಧೀಶರು ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಪೋಸ್ಟ್ ಹಂಚಿಕೊಳ್ಳುತ್ತಿರುವ ಹಲವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.
ಈ ಸಂಬಂಧ ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡ, ವಕೀಲ ಪ್ರದೀಪ್ ಸಿಂಗ್ ಅವರು ಸ್ಪಷ್ಟೀಕರಣ ನೀಡಿದ್ದು, ಚಿತ್ರದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವವರು ನ್ಯಾಯಾಧೀಶರಲ್ಲ; ಅವರು ವಕೀಲ ಸೈಯದ್ ಮಹಮೂದ್ ಹಸನ್ ಎಂದಿದ್ದಾರೆ. ಕಾಂಗ್ರೆಸ್ ಮುಖಂಡರಾಗಿರುವ ಸುಪ್ರಿಯಾ ಶ್ರೀನೆತ್ ಅವರು ಪೋಸ್ಟ್ ಹಂಚಿಕೊಂಡಿರುವ ಅಮಿತ್ ಮಾಳವೀಯ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದಿದ್ದಾರೆ. ಈ ಬಗ್ಗೆ ವಕೀಲರಾದ ಸೈಯದ್ ಮಹಮೂದ್ ಹಸನ್ ಅವರೂ ಸ್ಪಷ್ಟೀಕರಣ ನೀಡಿದ್ದು, ತಾವು ನ್ಯಾಯಾಧೀಶ ಅಲ್ಲ ಎಂದು ತಿಳಿಸಿರುವುದಾಗಿ ಬೂಮ್ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.