
ಭಾರತ ಮಹಿಳಾ ಕ್ರಿಕೆಟ್ ತಂಡದ ಬ್ಯಾಟರ್ ಸ್ಮೃತಿ ಮಂದಾನ ಮತ್ತು ಪುರುಷರ ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಕೊಲಾಜ್ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೊಹ್ಲಿ ಅವರಿಗೆ ಹೋಲಿಸಿದರೆ ಮಂದಾನ ಅವರು ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ವೇಗವಾಗಿ 5,000 ರನ್ ಗಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಅವರು ಈ ಸಾಧನೆ ಮಾಡಿದ್ದಾರೆ ಎಂದು ಪೋಸ್ಟ್ ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಹೌದು, ಇದು ನಿಜವಾದ ಸುದ್ದಿಯಾಗಿದೆ.
ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್‌ಗೆ ಒಳಪಡಿಸಿದಾಗ, ಹಲವರು ಈ ಪೋಸ್ಟ್ ಅನ್ನು ಇದೇ ಪ್ರತಿಪಾದನೆಯೊಂದಿಗೆ ಹಂಚಿಕೊಂಡಿರುವುದು ಕಂಡಿತು. ನಿರ್ದಿಷ್ಟ ಪದದ ಮೂಲಕ ಹುಡುಕಾಡಿದಾಗ, ಮಂದಾನ ಅವರು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 5,000 ರನ್‌ಗಳ ಗಡಿ ದಾಟಿದರು ಎಂದು 2025ರ ಅ.12ರಂದು ‘ದಿ ಎಕನಾಮಿಕ್ ಎಕ್ಸ್‌ಪ್ರೆಸ್’ನಲ್ಲಿ ವರದಿಯಾಗಿರುವುದು ಕಂಡಿತು.
29 ವರ್ಷದ ಅವರು 112 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಆಟಗಾರ್ತಿಯರಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಅವರು ಎಂದು ಬಿಸಿಸಿಐ ‘ಎಕ್ಸ್’ ಪೋಸ್ಟ್‌ನಲ್ಲಿ ತಿಳಿಸಿದೆ. ಕೊಹ್ಲಿ ಅವರು 114 ಪಂದ್ಯಗಳಲ್ಲಿ 5,000 ರನ್ ಸ್ಕೋರ್ ಮಾಡಿದ್ದರು ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ವಾಸ್ತವವಾಗಿದೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.