ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರದಿಂದ ಆನ್‌ಲೈನ್ ತರಗತಿಗಳು ಆರಂಭವಾಗಲಿವೆ ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು. ಇಲಾಖೆಯಿಂದ ಅಂತಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಲಾಗಿದೆ.
ಸೋಮವಾರ ಕೆಲವು ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಈ ಸುದ್ದಿ ಹರಿದಾಡುತ್ತಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆ ಸೋಮವಾರವೇ ಈ ಬಗ್ಗೆ ಸ್ಪಷ್ಟನೆ ಕೊಡಲು ಮುಂದಾಗಲಿಲ್ಲ. ಮಂಗಳವಾರ ಕೆಲವು ಪತ್ರಿಕೆಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು, ಇಲಾಖೆಯ ವತಿಯಿಂದ ಯಾವುದೇ ಆನ್‌ಲೈನ್ ತರಗತಿ ನಡೆಯುತ್ತಿಲ್ಲ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.