ADVERTISEMENT

ಫ್ಯಾಕ್ಟ್ ಚೆಕ್‌: ಪೊಲೀಸರ ಸಮ್ಮುಖದಲ್ಲೇ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 19:30 IST
Last Updated 27 ಏಪ್ರಿಲ್ 2022, 19:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ದೆಹಲಿಯ ಜಹಾಂಗೀರ್‌ಪುರಿ ಹಿಂಸಾಚಾರದ ಬಳಿಕ ಎರಡು ನಿಮಿಷದ ವಿಡಿಯೊವೊಂದು ವೈರಲ್ ಆಗಿದೆ. ಕೆಲವು ಯುವಕರು ಪೊಲೀಸರ ಸಮ್ಮುಖದಲ್ಲೇ ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯ ಇಲ್ಲಿದೆ. ಯುವಕರ ಜೊತೆಗಿದ್ದ ಕೆಲವು ಪೊಲೀಸರೂ ಕಲ್ಲುತೂರಾಟ ನಡೆಸಿದ ದೃಶ್ಯ ದಾಖಲಾಗಿದೆ. ಈ ವಿಡಿಯೊವನ್ನು ಟ್ವಿಟರ್‌ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಲವರು, ‘ನಿರ್ದಿಷ್ಟ ಸಮುದಾಯವೊಂದನ್ನು (ಮುಸ್ಲಿಂ) ಗುರಿಯಾಗಿಸಿಕೊಂಡು ಬಲಪಂಥೀಯ ಸಂಘಟನೆಯವರು ಈ ಕೃತ್ಯ ಎಸಗಿದ್ದಾರೆ’ ಎಂದು ಆರೋಪಿಸಿದ್ದಾರೆ.

ಈ ವಿಡಿಯೊವನ್ನು ಪರಿಶೀಲಿಸಿದ ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್‌ ತಂಡ, ಜಹಾಂಗೀರ್‌ಪುರಿ ಹಿಂಸಾಚಾರಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. 2020ರ ಜನವರಿಯಲ್ಲಿ ಈ ವಿಡಿಯೊವನ್ನು ಚಿತ್ರೀಕರಿಸಲಾಗಿದೆ. ಉತ್ತರ ಪ್ರದೇಶ ಫಿರೋಜಾಬಾದ್‌ನಲ್ಲಿ ಆಗ ನಡೆಯತ್ತಿದ್ದ ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ವೇಳೆ ಇದನ್ನು ಚಿತ್ರೀಕರಿಸಲಾಗಿದೆ. ಮುಸ್ಲಿಂ ಸಮದಾಯಕ್ಕೆ ಸೇರಿದ ಜನರ ಆಸ್ತಿಪಾಸ್ತಿಗಳಿಗೆ ಬೆಂಕಿ ಹಚ್ಚುವ ಹಾಗೂ ಅವರ ಮೇಲೆ ಕಲ್ಲು ತೂರಾಟ ನಡೆಸುವ ಈ ವಿಡಿಯೊವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ ಎಂದು ಎಂದು ವೆಬ್‌ಸೈಟ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT