ADVERTISEMENT

Fact check: ಮುಸ್ಲಿಂ ಗಂಡಸರನ್ನು ಥಳಿಸುತ್ತಿರುವ ವಿಡಿಯೊ, ಗೂಢಾಚಾರಿಕೆ ಆರೋಪ?

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 19:30 IST
Last Updated 24 ಫೆಬ್ರುವರಿ 2022, 19:30 IST
ಫ್ಯಾಕ್ಟ್‌ ಚೆಕ್‌
ಫ್ಯಾಕ್ಟ್‌ ಚೆಕ್‌   

ಭದ್ರತಾ ಸಿಬ್ಬಂದಿ ಮುಸ್ಲಿಂ ಗಂಡಸರನ್ನು ಥಳಿಸುತ್ತಿರುವ ವಿಡಿಯೊ ವೈರಲ್ ಆಗಿದೆ. 15 ಸೆಕೆಂಡ್‌ಗಳ ಈ ವಿಡಿಯೊವನ್ನು ಹಲವರು ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ಪಾಕಿಸ್ತಾನದ ಪರವಾಗಿ ಗೂಢಚರ್ಯೆಯಲ್ಲಿ ತೊಡಗಿದ್ದ ಮೊಹಮ್ಮದ್‌ ಯೂನಸ್‌, ಅಹ್ಮದ್‌ ಮೌಲಾನಾ ಮತ್ತು ಸದ್ದಾಮ್‌ ಅವರನ್ನು ಸೇನಾ ಸಿಬ್ಬಂದಿ ತಳಿಸುತ್ತಿದ್ದಾರೆ ಎಂದು ಈ ವಿಡಿಯೊಗೆ ಅಡಿಬರಹ ನೀಡಲಾಗಿseದೆ.

2020ರ ಏಪ್ರಿಲ್‌ನಲ್ಲಿ ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದ ಘಟನೆಯ ವಿಡಿಯೊ ತುಣುಕು ಇದು ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕೋವಿಡ್‌ ಸಾಂಕ್ರಾಮಿಕ ತಡೆಗಟ್ಟುವ ದಿಸೆಯಲ್ಲಿ ದೇಶವ್ಯಾಪಿ ಲಾಕ್‌ಡೌನ್‌ ಹೇರಿದ್ದ ಸಂರ್ಭದಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿ ಸ್ಥಳೀಯ ಮಸೀದಿಗೆ ಹೋಗಿದ್ದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಈ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಯು ಅದೇ ದಿನ ಹಲವಾರು ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು ಮತ್ತು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT