ADVERTISEMENT

ಭಾರತ್ ಬಯೋಟೆಕ್‌ ಇಂಡಿಯಾದ ಉಪಾಧ್ಯಕ್ಷರೇ ಮೊದಲ ಕ್ಲಿನಿಕಲ್ ಟ್ರಯಲ್‌ಗೆ ಒಳಗಾದರೇ?

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 19:30 IST
Last Updated 5 ಜುಲೈ 2020, 19:30 IST
ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ್ದ ಚಿತ್ರ
ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ್ದ ಚಿತ್ರ   
""
""

ಕೋವಿಡ್‌ ನಿಯಂತ್ರಣಕ್ಕೆ ಅಭಿವೃದ್ಧಿಪಡಿಸಲಾಗಿರುವ ‘ಕೋವ್ಯಾಕ್ಸಿನ್’ ಹೆಸರಿನ ಲಸಿಕೆಯನ್ನು ಕರ್ನಾಟಕದ ಒಂದು ಆಸ್ಪತ್ರೆ ಸೇರಿ ದೇಶದ 12 ಆಸ್ಪತ್ರೆಗಳಲ್ಲಿ ಕ್ಲಿನಿಕಲ್ ಟ್ರಯಲ್‌ಗೆ ಒಳಪಡಿಸಲಾಗಿದೆ. ಲಸಿಕೆ ಅಭಿವೃದ್ಧಿಪಡಿಸಿರುವ ಭಾರತ್ ಬಯೋಟೆಕ್‌ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷ ಡಾ. ವಿ.ಕೆ. ಶ್ರೀನಿವಾಸನ್ ಅವರು ಮೊದಲ ಕ್ಲಿನಿಕಲ್ ಟ್ರಯಲ್‌ಗೆ ಒಳಗಾದರು. ಇದನ್ನು ಬಿಂಬಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ್ದ ಚಿತ್ರ

ಇದಕ್ಕೆ ಭಾರತ ಬಯೋಟೆಕ್‌ಸ್ಪಷ್ಟನೆ ನೀಡಿದ್ದು, ಶ್ರೀನಿವಾಸನ್ ಅವರಿಗೂ ಈ ಚಿತ್ರಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದೆ. ರಕ್ತದ ಮಾದರಿಯನ್ನು ಸಂಗ್ರಹಿಸುವ ದೈನಂದಿನ ಚಿತ್ರವನ್ನು ಸಂಸ್ಥೆ ಹಂಚಿಕೊಂಡಿದೆ ಎಂದು ಸ್ಪಷ್ಟನೆ ನೀಡಿದೆ. ಈ ಚಿತ್ರದಲ್ಲಿರುವುದು ಉಪಾಧ್ಯಕ್ಷ ಶ್ರೀನಿವಾಸನ್ ಎಂಬುದಾಗಿ ತಪ್ಪಾಗಿ ಭಾವಿಸಲಾಗಿದೆ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ಭಾರತ್ ಬಯೋಟೆ‌ಕ್ ಸ್ಪಷ್ಟೀಕರಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT