ADVERTISEMENT

ಅಂತರ್ಜಾತಿ ವಿವಾಹ ಘರ್ಷಣೆ: ನೂರಾರು ಗುಡಿಸಲು ಭಸ್ಮ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2012, 7:35 IST
Last Updated 9 ನವೆಂಬರ್ 2012, 7:35 IST

ಧರ್ಮಪುರಿ (ಪಿಟಿಐ): ಯುವತಿಯೊಬ್ಬಳು ದಲಿತ ಯುವಕನೊಂದಿಗೆ ಅಂತರ್ಜಾತಿ ವಿವಾಹವಾದ ಕಾರಣಕ್ಕೆ ದಲಿತರು ವಾಸವಿದ್ದ 285 ಗುಡಿಸಲುಗಳಿಗೆ ಬೆಂಕಿ ಇಟ್ಟ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಿಂದ ತಡವಾಗಿ ವರದಿಯಾಗಿದೆ.

ಇಲ್ಲಿನ ಸವರ್ಣೀಯ ಯುವತಿಯೊಬ್ಬಳು ದಲಿತ ಯುವಕನನ್ನು ವರಿಸಿದ ಕಾರಣಕ್ಕೆ ಆಕೆಯ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಪ್ರತಿಕಾರ ತೆಗೆದುಕೊಳ್ಳಲು ಇಲ್ಲಿನ ಮೂರು ಕಾಲೋನಿಗಳಲ್ಲಿನ 285 ಗುಡಿಸಲುಗಳಿಗೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿದೆ.

ಬೆಂಕಿ ಹಬ್ಬುತ್ತಿದ್ದಂತೆ ಎಲ್ಲರೂ ಹೊರಗೋಡಿ ಬಂದಿದ್ದರಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಆದರೆ ಸುಮಾರು 285 ಮಂದಿ ತಮ್ಮ ಸೂರನ್ನ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಲ್ಲಿಯವರಗೂ 90 ಮಂದಿಯನ್ನು ಘಟನೆ ಸಂಬಂಧ ಬಂಧಿಸಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಂತರ್ಜಾತಿ ವಿವಾಹವಾದ ದಂಪತಿಗಳು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಸೂರನ್ನು ಕಳೆದುಕೊಂಡವರಿಗೆ ಕುಡಿಯುವ ನೀರು ಹಾಗೂ ಆಹಾರವನ್ನು ಪೂರೈಸಲಾತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.