ಹೈದರಾಬಾದ್ (ಐಎಎನ್ಎಸ್): ಇಲ್ಲಿನ ರಾಜೀವ್ಗಾಂಧಿ ವಿಮಾನ ನಿಲ್ದಾಣದಲ್ಲಿ ಸಿಂಗಪುರದ ಮೂವರು ವ್ಯಕ್ತಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 18 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೂವರೂ ತಮ್ಮ ಶೂ ಹಾಗೂ ಪ್ಯಾಂಟ್ನಲ್ಲಿ ತಲಾ 6 ಕೆ.ಜಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಮೂವರನ್ನೂ ಬಂಧಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.