ಜಮ್ಮು (ಐಎಎನ್‌ಎಸ್): ಕಾಶ್ಮೀರದ 67 ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ವಾಪಸ್ ಪಡೆದ ಉತ್ತರ ಪ್ರದೇಶ ಸರ್ಕಾರಕ್ಕೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಧನ್ಯವಾದ ಸಲ್ಲಿಸಿದ್ದಾರೆ.
‘ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ವಾಪಸ್ ಪಡೆಯಲು ಸಹಕರಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಧನ್ಯವಾದಗಳು’ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.
ಭಾರತದ ವಿರುದ್ಧ ಜಯಗಳಿಸಿದ ಪಾಕಿಸ್ತಾನ ಕ್ರಿಕೆಟ್ ತಂಡದ ಪರವಾಗಿ ವಿಜಯೋತ್ಸವ ಆಚರಿಸಿದ್ದ ಕಾರಣಕ್ಕಾಗಿ ಕಾಶ್ಮೀರದ 67 ವಿದ್ಯಾರ್ಥಿಗಳ ವಿರುದ್ಧ ಉತ್ತರಪ್ರದೇಶ ಸರ್ಕಾರ ದೇಶ ದ್ರೋಹದ ಪ್ರಕರಣ ದಾಖಲಿಸಿತ್ತು. ಇದನ್ನು ಖಂಡಿಸಿ ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ನಡೆದಿತ್ತು.
ಗುರುವಾರ ಒಮರ್ ಅಬ್ದುಲ್ಲಾ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯುವಂತೆ ಅಖಿಲೇಶ್ ಯಾದವ್ ಅವರನ್ನು ಕೋರಿದ್ದರು.
‘ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಬಾರದಿತ್ತು. ಅನುಚಿತ ವರ್ತನೆ ತೋರಿದ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರಹಾಕುವ ಹಕ್ಕು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಇದೆ ಎಂದೂ ಒಮರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.