ADVERTISEMENT

ಅಜರ್ ಪುತ್ರನ ಸ್ಥಿತಿ ಇನ್ನೂ ಗಂಭೀರ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2011, 18:50 IST
Last Updated 12 ಸೆಪ್ಟೆಂಬರ್ 2011, 18:50 IST

ಹೈದರಾಬಾದ್: ಮೋಟಾರ್ ಸೈಕಲ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಇಲ್ಲಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗನನ್ನು ನೋಡಲು ಮಾಜಿ ಕ್ರಿಕೆಟಿಗ ಅಜರುದ್ದೀನ್ ಸೋಮವಾರ ಬೆಳಿಗ್ಗೆ ಲಂಡನ್‌ನಿಂದ ಧಾವಿಸಿದರು.

ಮಗ ಅಯಾಜುದ್ದೀನ್ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ. ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತದಲ್ಲಿ ಅಜರುದ್ದೀನ್ ತಂಗಿಯ ಮಗ ಅಜ್ಮಲ್ ಉರ್ ರೆಹಮಾನ್ (16) ಮೃತಪಟ್ಟಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.