ಜಮ್ಮು (ಪಿಟಿಐ): ಇಲ್ಲಿನ ದೋಡಾ ಜಿಲ್ಲೆಯ ಬಂದೇರ್ವಾ ತೆಹ್ಸಿಲ್ ಎಂಬಲ್ಲಿ ಉಗ್ರರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮಗ್ರಿಗಳನ್ನು ಭದ್ರತಾ ಪಡೆ ಸಿಬ್ಬಂದಿ ಶನಿವಾರ ವಶಪಡಿಸಿಕೊಂಡಿದ್ದಾರೆ.
ಎಕೆ 47, ಚೀನಾ ಬಂದೂಕು, ನಾಡಬಂದೂಕುಗಳು ಸೇರಿದಂತೆ ಅನೇಕ ವಿಧದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.