ADVERTISEMENT

ಅಡುಗೆ ಅನಿಲ ಪೂರೈಸುವಾಗಲೇ ತೂಕ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 19:30 IST
Last Updated 19 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಗ್ರಾಹಕರ ಮನೆ ಬಾಗಿಲಿಗೆ ಪೂರೈಸುವಾಗಲೇ ಅವುಗಳ ತೂಕವನ್ನು ಪರಿಶೀಲಿಸಿ, ಗ್ರಾಹಕರಿಗೆ ಆಗುವ ಮೋಸವನ್ನು ತಪ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಮೂಲಕ ಗ್ರಾಹಕರ ಹಕ್ಕನ್ನು ಎತ್ತಿ ಹಿಡಿದಿದೆ.

ಮನೆ ಬಾಗಿಲಿಗೆ ಸಿಲಿಂಡರ್ ತಲುಪಿಸುವ ವಿತರಕರು, ತಮ್ಮ ಜತೆಯಲ್ಲಿ ತೂಕದ ಯಂತ್ರವನ್ನು ಕೊಂಡೊಯ್ಯಬೇಕು. ಗ್ರಾಹಕನ ಹಾಜರಿಯಲ್ಲೇ ಸಿಲಿಂಡರ್‌ನ್ನು ತೂಕ ಮಾಡಿ ಪೂರೈಸುವ ಮೂಲಕ ಗ್ರಾಹಕರ ಹಕ್ಕನ್ನು  ಕಾಯ್ದುಕೊಳ್ಳಬೇಕು ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತೈಲ ಕಂಪೆನಿಗಳಿಗೆ ನೀಡಿದ್ದ ಸೂಚನೆಯನ್ನು ನ್ಯಾಯಾಲಯ ಪುನರುಚ್ಚರಿಸಿದೆ.

`ಈ ಕುರಿತು ದೂರದರ್ಶನ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ನೀಡುವ ಮೂಲಕ ಜನರಲ್ಲಿ  ಜಾಗೃತಿ ಮೂಡಿಸಬೇಕು~ ಎಂದು ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯ ಅವರಿದ್ದ ನ್ಯಾಯಪೀಠ ನಿರ್ದೇಶನ ನೀಡಿತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.