ADVERTISEMENT

ಅಣ್ಣಾ ಉಪವಾಸ ಅಂತ್ಯ

ಬೇಡಿಕೆ ಈಡೇರಿಸಲು ಆರು ತಿಂಗಳ ಗಡುವು

ಪಿಟಿಐ
Published 29 ಮಾರ್ಚ್ 2018, 19:30 IST
Last Updated 29 ಮಾರ್ಚ್ 2018, 19:30 IST
ಅಣ್ಣಾ ಹಜಾರೆ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಎಳನೀರು ಕುಡಿಸಿದರು – ಪಿಟಿಐ ಚಿತ್ರ
ಅಣ್ಣಾ ಹಜಾರೆ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಎಳನೀರು ಕುಡಿಸಿದರು – ಪಿಟಿಐ ಚಿತ್ರ   

ನವದೆಹಲಿ: ಕೇಂದ್ರದಲ್ಲಿ ಲೋಕಪಾಲರು ಹಾಗೂ ರಾಜ್ಯಗಳಲ್ಲಿ ಲೋಕಾಯುಕ್ತರನ್ನು ನೇಮಿಸುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇಲ್ಲಿನ ರಾಮಲೀಲಾ ಮೈದಾನದಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು 6ನೇ ದಿನವಾದ ಗುರುವಾರ ಅಂತ್ಯಗೊಳಿಸಿದ್ದಾರೆ.

‘ಲೋಕಪಾಲ್‌, ಲೋಕಾಯುಕ್ತರನ್ನು ನೇಮಿಸಲು ಹಾಗೂ ರೈತರ ಬೆಳೆಗೆ ನಿಗದಿತ ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಸೆಪ್ಟಂಬರ್‌ ನಂತರ ಮತ್ತೆ ಹೋರಾಟ ಕೈಗೊಳ್ಳುತ್ತೇನೆ’ ಎಂದು ಅಣ್ಣಾ ಹಜಾರೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಶೂ ಎಸೆತ: ಅಣ್ಣಾ ಹಜಾರೆ ಸತ್ಯಾಗ್ರಹ ಕೈಗೊಂಡಿದ್ದ ವೇದಿಕೆಯನ್ನು ಗುರಿಯಾಗಿಸಿಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಶೂ ಎಸೆದಿದ್ದಾನೆ. ವೇದಿಕೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.