ADVERTISEMENT

ಅಣ್ಣಾ ವಿವಿ ಬಿ.ಟೆಕ್ ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 25 ಜನವರಿ 2016, 9:36 IST
Last Updated 25 ಜನವರಿ 2016, 9:36 IST
ಅಣ್ಣಾ ವಿವಿ ಬಿ.ಟೆಕ್ ವಿದ್ಯಾರ್ಥಿನಿ ಸಾವು
ಅಣ್ಣಾ ವಿವಿ ಬಿ.ಟೆಕ್ ವಿದ್ಯಾರ್ಥಿನಿ ಸಾವು   

ಚೆನ್ನೈ(ಪಿಟಿಐ): ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ(19) ಹಾಸ್ಟೆಲ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವೇಲುಪುರಂ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಬಳಿಕ ನಡೆದಿರುವ ಈ ಘಟನೆ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ವಿದ್ಯಾರ್ಥಿನಿಯನ್ನು ಅಣ್ಣಾ ವಿವಿಯ ಅಧೀನದ ಗಿಂಡಿ ಎಂಜಿನಿಯರಿಂಗ್ ಕಾಲೇಜಿನ ಸೆರಾಮಿಕ್‌ ಟೆಕ್ನಾಲಜಿ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿನಿ ಷಣ್ಮುಗ ಪ್ರೀತ್ ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ 11ರ ಸುಮಾರಿಗೆ ಹಾಸ್ಟೆಲ್‌ನ ತಾರಸಿ ಮೇಲಿನಿಂದ ವಿದ್ಯಾರ್ಥಿನಿ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ADVERTISEMENT

‘ಇಲ್ಲಿಯವರೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಇದೊಂದು ಅಪಘಾತ ಎನಿಸುತ್ತದೆ’ ಎಂದು ಕೊಟ್ಟೂರುಪುರಂ ಪೊಲೀಸ್‌ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯು ಪೂರ್ಣ ತನಿಖೆಯ ಬಳಿಕ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.