ನವದೆಹಲಿ (ಪಿಟಿಐ): ಅತ್ಯಾಚಾರಕ್ಕೊಳಗಾದವರ ಚಿಕಿತ್ಸೆಗೆ ಈ ಹಿಂದೆ ಅನುಸರಿಸುತ್ತಿದ್ದ ’ಟೂ ಫಿಂಗರ್’ ಪರೀಕ್ಷೆಯನ್ನು ನಿಷೇಧಿಸಿ, ನೂತನ ರಾಷ್ಟ್ರೀಯ ಮಾರ್ಗದರ್ಶಿ ಸೂತ್ರಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಜಾರಿ ಮಾಡಿದೆ.
ಅತ್ಯಚಾರಕ್ಕೆ ಒಳಗಾದವರ ಚಿಕಿತ್ಸೆಗಾಗಿ ಎಲ್ಲ ಆಸ್ಪತ್ರೆಗಳಲ್ಲೂ ಪ್ರತ್ಯೇಕ ಕೋಣೆಗಳನ್ನು ತೆರೆಯುವುದು ಹಾಗೂ ಆಧುನಿಕ ವಿಧಿವಿಜ್ಞಾನ ಮತ್ತು ವೈಧ್ಯಕೀಯ ಚಿಕಿತ್ಸೆಯನ್ನು ನೀಡುವಂತೆ ಸೂಚಿಸಲಾಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಆರೋಗ್ಯ ಸಂಶೋಧನಾ ಇಲಾಖೆ (ಡಿಎಚ್‌ಆರ್) ಗಳ ತಜ್ಞರು ಮತ್ತು ನುರಿತ ವೈದ್ಯಾಧಿಕಾರಿಗಳ ಸಹಯೋಗದೊಂದಿಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸಲು ಹೊಸ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.