ADVERTISEMENT

ಅತ್ಯಾಚಾರಿ ಆರೋಪಿ ಪರೀಕ್ಷೆ ವ್ಯವಸ್ಥೆಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 20 ಜೂನ್ 2013, 10:17 IST
Last Updated 20 ಜೂನ್ 2013, 10:17 IST


ನವದೆಹಲಿ (ಪಿಟಿಐ): ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ವಿನಯ್ ಶರ್ಮಾ ಇದೀಗ ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಸಿದ್ಧನಾಗಿದ್ದು, ಆತನಿಗೆ ಜೈಲಿನ ಆವರಣದಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕೆಂದು ದೆಹಲಿ ನ್ಯಾಯಾಲಯವೊಂದು ಗುರುವಾರ ದೆಹಲಿ ವಿಶ್ವವಿದ್ಯಾಲಯ, ಐಜಿಎನ್‌ಓಯು ಹಾಗೂ ತಿಹಾರ್ ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದೆಹಲಿ ವಿಶ್ವವಿದ್ಯಾಲಯದಲ್ಲಿ ದೂರಶಿಕ್ಷಣದಡಿ ಪ್ರಥಮ ವರ್ಷದ ಪದವಿ ಅಧ್ಯಯನ ನಡೆಸುತ್ತಿರುವ ವಿನಯ್ ಪರೀಕ್ಷಾ ವೇಳಾಪಟ್ಟಿಯಂತೆ ಜೂನ್ 19 ರಿಂದ 26ರ ವರೆಗೆ ಪರೀಕ್ಷೆ ಬರೆಯಲು ತನಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರ್ಟ್‌ನ ಮೊರೆ ಹೋಗಿದ್ದ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ರಜಾಕಾಲದ ನ್ಯಾಯಾಧೀಶ ಹಾಗೂ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನೀಲಂ ಸಿಂಗ್ ಅವರು ಆತನ ಜಾಮೀನು ಅರ್ಜಿಯನ್ನು ತಳ್ಳಿಹಾಕಿ ಕೋರ್ಟ್ ಜೈಲಿನಲ್ಲೇ ಆತನ ಪರೀಕ್ಷೆ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.