ಲಖನೌ: ಅತ್ಯಾಚಾರ ಆರೋಪಿ, ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರನ್ನು ಪೊಲೀಸರು ಲಖನೌನಲ್ಲಿ ಬುಧವಾರ ಬಂಧಿಸಿದ್ದಾರೆ.
ಪ್ರಜಾಪತಿ ಅವರ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದರು.
ಈ ಮೂವರ ವಿಚಾರಣೆ ನಡೆಸಿದಾಗ ಪ್ರಜಾಪತಿ ಎಲ್ಲಿ ಅಡಗಿದ್ದಾರೆ ಎಂಬ ಮಾಹಿತಿ ತಿಳಿದಿದೆ. ಆ ಮಾಹಿತಿಯ ಆಧಾರದ ಮೇಲೆ ಪ್ರಜಾಪತಿ ಅವರನ್ನು ಬಂಧಿಸಲಾಗಿದೆ.
ಪ್ರಜಾಪತಿ ದೇಶದಿಂದ ಪರಾರಿಯಾಗಬಹುದು ಎಂದು ಅವರ ವಿರುದ್ಧ ‘ರದ್ದತಿ ಪತ್ರ’ವನ್ನೂ ಹೊರಡಿಸಲಾಗಿತ್ತು.
ಸಮಾಜವಾದಿ ಪಕ್ಷದ ಗಾಯತ್ರಿ ಪ್ರಜಾಪತಿ ಅಖಿಲೇಶ್ ಯಾದವ್ ಸಂಪುಟದಲ್ಲಿ ಸಚಿವರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.