ADVERTISEMENT

ಅತ್ಯಾಚಾರ ತಡೆ ಮಸೂದೆಗೆ ರಾಷ್ಟ್ರಪತಿ ಅಂಕಿತ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 19:59 IST
Last Updated 3 ಏಪ್ರಿಲ್ 2013, 19:59 IST

ನವದೆಹಲಿ (ಐಎಎನ್‌ಎಸ್): ಅತ್ಯಾಚಾರಿಗಳಿಗೆ ಅತ್ಯುಗ್ರ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ತಿದ್ದುಪಡಿ ಮಾಡಲಾದ ಮಸೂದೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂಕಿತ ಹಾಕಿದ್ದಾರೆ.

`ಮಸೂದೆಗೆ ಮಂಗಳವಾರ ರಾಷ್ಟ್ರಪತಿಗಳು ಸಹಿ ಹಾಕಿದ್ದು  ಇದನ್ನು ಮುಂದೆ ಕ್ರಿಮಿನಲ್ ಕಾನೂನು (ತಿದ್ದುಪಡಿ) 2013 ಎಂದು ಕರೆಯಲಾಗುತ್ತದೆ' ಎಂದು ಗೃಹ ಸಚಿವಾಲಯದ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ. ಈ ಮಸೂದೆಗೆ ಮಾ. 19ರಂದು ಲೋಕಸಭೆಯಲ್ಲಿ ಹಾಗೂ ಮಾ. 21ರಂದು ರಾಜ್ಯಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. 2012ರ ಡಿ. 16ರಂದು ದೆಹಲಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಹಿನ್ನೆಲೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಂಬಂಧ ಶಿಫಾರಸು ಮಾಡಲು ರಚಿಸಲಾಗಿದ್ದ ನ್ಯಾಯಮೂರ್ತಿ ಜೆ.ಎಸ್. ವರ್ಮಾ  ಸಮಿತಿ ನೀಡಿದ ಸಲಹೆಗಳನ್ನು ಪರಿಷ್ಕೃತ ಮಸೂದೆ ಒಳಗೊಂಡಿದೆ.

ಅತ್ಯಾಚಾರಿಗಳಿಗೆ ಜೀವಾವಧಿವರೆಗೆ ವಿಸ್ತರಿಸಬಹುದಾದ ಕನಿಷ್ಠ 20 ವರ್ಷಗಳ ಶಿಕ್ಷೆ ವಿಧಿಸಲು ಈ ಮಸೂದೆ ಅವಕಾಶ ಕಲ್ಪಿಸುತ್ತದೆ. ಲೈಂಗಿಕ ದೌರ್ಜನ್ಯದ ವಿಷಯವೂ ಪರಿಷ್ಕ್ರತ ಮಸೂದೆಯ ವ್ಯಾಪ್ತಿಗೆ ಸೇರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.