ADVERTISEMENT

ಅತ್ಯಾಚಾರ ಪ್ರಕರಣಗಳ ತನಿಖೆಗೆ ವಿಶೇಷ ಕಿಟ್‌

ಮಹಿಳಾ, ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪೂರೈಕೆ

ಪಿಟಿಐ
Published 6 ಜೂನ್ 2018, 19:30 IST
Last Updated 6 ಜೂನ್ 2018, 19:30 IST
ಅತ್ಯಾಚಾರ ಪ್ರಕರಣಗಳ ತನಿಖೆಗೆ ವಿಶೇಷ ಕಿಟ್‌
ಅತ್ಯಾಚಾರ ಪ್ರಕರಣಗಳ ತನಿಖೆಗೆ ವಿಶೇಷ ಕಿಟ್‌   

ನವದೆಹಲಿ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರನ್ನು ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಅನುಕೂಲವಾಗುವಂತೆ ವಿಶೇಷವಾಗಿ ರೂಪಿಸಿರುವ ಕಿಟ್‌ಗಳನ್ನು ಎಲ್ಲ ಪೊಲೀಸ್‌ ಠಾಣೆ ಮತ್ತು ಆಸ್ಪತ್ರೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಪೂರೈಸಲಿದೆ ಎಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಬುಧವಾರ ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣಗಳ ತ್ವರಿತ ತನಿಖೆಗಾಗಿ, ದೇಶದಾದ್ಯಂತ ಪೊಲೀಸ್‌ ಠಾಣೆಗಳು ಮತ್ತು ಆಸ್ಪತ್ರೆಗಳು ಅತ್ಯಾಚಾರ ಸಾಕ್ಷ್ಯ ಸಂಗ್ರಹ ಕಿಟ್‌ಗಳನ್ನು ಹೊಂದಿರಲಿವೆ. ಈ ತನಿಖಾ ಕಿಟ್‌ಗಳನ್ನು ರಾಜ್ಯ ಸರ್ಕಾರ ಖರೀದಿಸಬೇಕು. ಅದಕ್ಕಾಗಿ ನಿರ್ಭಯಾ ನಿಧಿಯ ನೆರವು ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

‘ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಪ್ರಮುಖ ಸಾಕ್ಷ್ಯಗಳಾದ ರಕ್ತ ಮತ್ತು ವೀರ್ಯದ ಮಾದರಿಗಳನ್ನು ಸಂಗ್ರಹಿಸುವ ವ್ಯವಸ್ಥೆಯನ್ನು ಈ ಕಿಟ್‌ ಹೊಂದಿರಲಿದೆ. ಅಪರಾಧ ನಡೆದ ಸ್ಥಳದಿಂದ ಏನೆಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಬೇಕೆಂಬ ಸೂಚನೆಗಳನ್ನೂ ಈ ಕಿಟ್‌ಗಳು ಒಳಗೊಂಡಿರುತ್ತವೆ’ ಎಂದು ಮೇನಕಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.