ADVERTISEMENT

ಅತ್ಯಾಚಾರ ಪ್ರಕರಣ : ನ್ಯಾಯಾಂಗ ಆಯೋಗ ರಚನೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 10:13 IST
Last Updated 26 ಡಿಸೆಂಬರ್ 2012, 10:13 IST

ನವದೆಹಲಿ (ಐಎಎನ್‌ಎಸ್) : ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ನ್ಯಾಯಾಂಗ ಆಯೋಗದಿಂದ ತನಿಖೆ ನಡೆಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ.

ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶೆ ಉಷಾ ಮೆಹ್ರಾ ನೇತೃತ್ವದ ನ್ಯಾಯಾಂಗ ಆಯೋಗವು ಪ್ರಕರಣದ ತನಿಖೆ ನಡೆಸಲಿದೆ ಎಂದು ಹಣಕಾಸು ಸಚಿವ ಪಿ. ಚಿದಂಬರಂ ಅವರು ಸಂಪುಟ ಸಭೆ ಬಳಿಕ ತಿಳಿಸಿದರು.

ದೆಹಲಿಯ ಸಮೂಹಿಕ ಅತ್ಯಾಚಾರ ಪ್ರಕರಣ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದಿರುವ ಚಿದಂಬರಂ ಅವರು,  ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಮಹಿಳೆಯರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT