ADVERTISEMENT

ಅತ್ಯಾಚಾರ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2012, 19:30 IST
Last Updated 5 ನವೆಂಬರ್ 2012, 19:30 IST

ನವದೆಹಲಿ (ಐಎಎನ್‌ಎಸ್): ತಮ್ಮ ಮೇಲೆ ಚಲನಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ನಟಿ ಪ್ರೀತಿ ಜೈನ್ ಅವರು ಸಲ್ಲಿಸಿದ್ದ ದೂರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಕರಣ ನಡೆದು ಒಂಬತ್ತು ವರ್ಷಗಳಾದರೂ ಈ ಕುರಿತು ಪರಿಹಾರ ಕಂಡುಕೊಳ್ಳುವ ಆಸಕ್ತಿ ಅರ್ಜಿದಾರರಿಗೆ ಇದ್ದಂತೆ ಕಾಣುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎಚ್.ಎಲ್. ದತ್ತು ಹಾಗೂ ಸಿ.ಕೆ. ಪ್ರಸಾದ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಚಿತ್ರವೊಂದರಲ್ಲಿ ಪ್ರಮುಖ ಪಾತ್ರ ಕೊಡಿಸುವುದಾಗಿ ಭರವಸೆ ನೀಡಿದ ಭಂಡಾರ್ಕರ್ ತಮ್ಮ ಜತೆ 16 ಬಾರಿ ದೈಹಿಕ ಸಂಪರ್ಕ ನಡೆಸಿದ್ದರು ಎಂದು ಆರೋಪಿಸಿ ಜೈನ್ 2004ರಲ್ಲಿ ದೂರು ಸಲ್ಲಿಸಿದ್ದರು.


 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT